ಕಲಬುರಗಿ ತಾಲೂಕು: ಕುಡಿಯುವ ನೀರಿನ ಸಮಸ್ಯೆಪರಿಹಾರಕ್ಕಾಗಿ 24X7 ಸಹಾಯವಾಣಿ ಕೇಂದ್ರ ಪ್ರಾರಂಭ
ಕಲಬುರಗಿ:ಮಾ.28:ಕಲಬುರಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಬೇಸಿಗೆ ಕಾಲದಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕಾಗಿ ಕಲಬುರಗಿ ತಾಲೂಕು ಪಂಚಾಯತ್ ಕಚೇರಿಯಲ್ಲಿ 24X7 ಸಹಾಯವಾಣಿ ಕೇಂದ್ರ ಪ್ರಾರಂಭಿಸಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಕಲಬುರಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ ತಾಲೂಕಿನ ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಈ 24X7 ಸಹಾಯವಾಣಿ ಕೇಂದ್ರದ ಸಿಬ್ಬಂದಿಯಾದ ಕಲಬುರಗಿ ತಾಲೂಕು ಪಂಚಾಯತ್ ಕಚೇರಿಯ ಸುಶಿಕ್ಷಿತ ಸಹಾಯಕರಾದ ಪ್ರಕಾಶ ಕುಲಕರ್ಣಿ ಇವರ ಮೊಬೈಲ್ ಸಂಖ್ಯೆ 9972788280ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.