ಅಬಕಾರಿ ದಾಳಿ:ಓರ್ವನ ಬಂಧನ
ಯಾದಗಿರಿ : ಮಾ.28 : ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ನಿಮಿತ್ಯ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರ ಆದೇಶದ ಅನ್ವಯ ಯಾದಗಿರಿ ಜಿಲ್ಲೆಯಾದ್ಯಂತ ಹೋಳಿ ಹಬ್ಬದ ಪ್ರಯುಕ್ತ 2024ರ ಮಾರ್ಚ್ 24 ರಂದು ಸಂಜೆ 6 ಗಂಟೆಯಿಂದ 2024ರ ಮಾರ್ಚ್ 27ರ ಬೆಳಿಗ್ಗೆ 6 ಗಂಟೆಯ ವರೆಗೆ ಎಲ್ಲಾ ವಿವಿಧ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶಿಸಿದ್ದರೂ ಈ ಆದೇಶ ಉಲ್ಲಂಘಿಸಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿತನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಯಾದಗಿರಿ ಅಬಕಾರಿ ಡಿ.ಸಿ ಅವರು ತಿಳಿಸಿದ್ದಾರೆ.