ಕಡ್ಡಾಯ ಮತದಾನ ಕುರಿತು ಜಾಗೃತಿ
ಕಲಬುರಗಿ:ಮಾ.27: ಜಿಲ್ಲೆಯ ಕಮಲಾಪುರ್ ತಾಲೂಕಿನ ಸೊಂತ ಗ್ರಾಮ ಪಂಚಾಯಿತಿ ಗ್ರಾಮದಲ್ಲಿ. ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಕಾಮಗಾರಿ ಸ್ಥಳದಲ್ಲಿ ತಾಲೂಕ ಪಂಚಾಯತಿಯ ಉದ್ಯೋಗ ಖಾತ್ರಿ ಪ್ರಭಾರಿ ಸಹಾಯಕ ನಿರ್ದೇಶಕರಾದ ಜಗನ್ನಾಥ ರೆಡ್ಡಿ ಅವರ ನೇತೃತ್ವದಲ್ಲಿ 2024 ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು ಮತ್ತು ನರೇಗಾ ಕಾಮಗಾರಿಗಳ ಕುರಿತು ತಿಳಿಸಿದರು. ಇಶ್ರಮ, ಲೇಬರ್ ಕಾರ್ಡ್, ಇತರೆ ಸೌಲಭ್ಯಗಳ ಕುರಿತು. ತಿಳಿಸಿದರು ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಬಿಎಫ್‍ಟಿ ಹಾಗೂ ಕೂಲಿ ಕಾರ್ಮಿಕರು ಹಾಜರಿದ್ದರು.