ಮೋದಿ ಸಾರಥ್ಯದಲ್ಲಿ ದೇಶದ ಅಭಿವೃದ್ಧಿ : ಖೂಬಾ
ಔರಾದ್ : ಮಾ.27:ಭಾರತ ಶೀಘ್ರವೇ ವಿಶ್ವದ ಶ್ರೇಷ್ಠ ಆರ್ಥಿಕ ಶಕ್ತಿಯಾಗಿ ನಿರ್ಮಾಣಗೊಳ್ಳಲಿದೆ, ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ವಿಶ್ವದ ಶ್ರೇಷ್ಠ ರಾಷ್ಟ್ರವನ್ನಾಗಿಸಿದ್ದಾರೆ. ಜನರಿಗೆ ಹತ್ತಾರು ಮಹತ್ವದ ಕಾರ್ಯಕ್ರಮಗಳನ್ನು ನೀಡಿದ್ದಾರೆ, ಮೋದಿ ಸಾರಥ್ಯದಲ್ಲಿ ದೇಶದ ಅಭಿವೃದ್ಧಿ ಸಾಧ್ಯ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ಮಂಗಳವಾರ ಪಟ್ಟಣದ ನ್ಯಾಯವಾದಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿ ಅಭಿವೃದ್ಧಿ ಮೋದಿಯಿಂದ ಮಾತ್ರ ಸಾಧ್ಯ. ಕೇಂದ್ರ ಮತ್ತು ಕರ್ನಾಟಕದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕು. ಭಾರತ ಶೀಘ್ರವೇ ವಿಶ್ವದ ಶ್ರೇಷ್ಠ ಆರ್ಥಿಕ ಶಕ್ತಿಯಾಗಿ ನಿರ್ಮಾಣಗೊಳ್ಳಲಿದೆ. ಆದ್ದರಿಂದ ಈ ಬಾರಿ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 12 ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ವಿಮಾನಯಾನ, ಸೈನಿಕ ಶಾಲೆ, ಸಿಪೆಟ್ ಕಾಲೇಜು, ಬೀದರ್ -ಔರಾದ್ ರಾಷ್ಟ್ರೀಯ ಹೆದ್ದಾರಿ, ಬೀದರ-ನಾಂದೇಡ್ ರೈಲು ಮಾರ್ಗ, ಸೋಲಾರ ಪಾರ್ಕ್ ಸೇರಿದಂತೆ ಅನೇಕ ಕೆಲಸಗಳು ಮಾಡಲಾಗಿದೆ. ಪ್ರಧಾನ ಮಂತ್ರಿ ಫಸಲು ಯೋಜನೆಯಲ್ಲಿ ರಾಜ್ಯಕ್ಕೆ ಬೀದರ ಪ್ರಥಮ ಸ್ಥಾನದಲ್ಲಿದೆ. ಮೋದಿ ಅವರ ಆಸೆಯಂತೆ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಕೆಲಸ ಮಾಡಿದ್ದೇನೆ. 3 ನೇ ಬಾರಿ ಅವಕಾಶ ನೀಡುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸೋಮನಾಥ ಪಾಟೀಲ್, ನ್ಯಾಯವಾದಿ ಸಂಘದ ಅಧ್ಯಕ್ಷ ಸಂದೀಪ ಮೇತ್ರೆ, ಸತೋಷ ಉಪ್ಪೆ, ಆರ್. ಪಿ. ಜಾಧವ ಪ್ರಾಸ್ತಾವಿಕವಾಗಿ ಮಾತನಾಡಿದರು. ನ್ಯಾಯವಾದಿ ಸಂಘದ ಉಪಾಧ್ಯಕ್ಷ ಶಿವರಾಜ ಪಾಟೀಲ್, ಬಿ. ವೈ. ಪಾಟೀಲ್ ಸೇರಿದಂತೆ ಅನೇಕರಿದ್ದರು.