ಕೊಳೆತ ಶವಕ್ಕೆ ಅಂತ್ಯಸಂಸ್ಕಾರ
ಪುತ್ತೂರು; ಮನೆಯೊಂದರಲ್ಲಿ ಮೃತಪಟ್ಟು ಕೊಳೆತು ನಾರುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹವನ್ನು ಪುತ್ತೂರು ಮಡಿವಾಳಕಟ್ಟೆಯ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಬಲ್ನಾಡು ಗ್ರಾಮದ ದೇರಾಜೆ ಅಟ್ಲಾರು ಎಂಬಲ್ಲಿನ ಒಂಟಿ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಕಳೆದ ೮ ದಿನಗಳ ಹಿಂದೆ ಮೃತಪಟ್ಟಿದ್ದರು. ಆದರೆ ಈ ಘಟನೆ ಯಾರ ಗಮನಕ್ಕೂ ಬಂದಿರಲಿಲ್ಲ ಎನ್ನಲಾಗಿದೆ. ಕೊಳೆತು ನಾರುತ್ತಿದ್ದ ಹಿನ್ನಲೆಯಲ್ಲಿ ಆ ವ್ಯಕ್ತಿ ಮೃತಪಟ್ಟಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಮಾಹಿತಿ ತಿಳಿದ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ವಿನಾಯಕ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಅಂಬುಲೆನ್ಸ್ ಮೂಲಕ ಮೃತದೇಹವನ್ನು ಸ್ಮಶಾನಕ್ಕೆ ತಂದು ಅಂತ್ಯಸಂಸ್ಕಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಬಲ್ನಾಡು ಗ್ರಾಪಂ ಸದಸ್ಯೆ ಪರಮೇಶ್ವರಿ ಬಬ್ಬಿಲಿ, ಕಿರಣ್ ಕುಮಾರ್ ಬಲ್ನಾಡು ಭಾಗಿಯಾಗಿದ್ದರು.