ರೇಣುಕಾಚಾರ್ಯರ ಜಯಂತಿ
ಗದಗ,ಮಾ27: ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಶ್ರೀ ರೇಣುಕಾಚಾರ್ಯರ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು.