ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ
ಸಂಜೆವಾಣಿ ನ್ಯೂಸ್
ಮೈಸೂರು: ಮಾ.27:- ವಿಶ್ವದಲ್ಲಿಯೇ ಅತೀ ದೊಡ್ಡ ಚುನಾವಣೆಯೆಂದರೆ ಅದು ನಮ್ಮ ಲೋಕಸಭಾ ಚುನಾವಣೆ. ಇಂತಹ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರನು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನೈತಿಕ ಮತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ದಿನೇಶ್ ಅವರು ಹೇಳಿದರು.
ಇಂದು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಶಾಹಿ ಎಕ್ಸ್ ಪೆÇರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಘಟಕ 37 ಮತ್ತು ಘಟಕ 42 ರಲ್ಲಿ ನಡೆದ ಮತದಾರರ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನವು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಭಾರತೀಯನಿಗೂ ಮತಚಲಾಯಿಸುವ ಹಕ್ಕನ್ನು ನೀಡಿದೆ. ಅದನ್ನು ಸರಿಯಾದ ಸಮಯದಲ್ಲಿ ಬಳಸಿಕೊಂಡು ಉತ್ತಮ ಪ್ರಜಾಪ್ರಭುತ್ವವನ್ನು ನಿರ್ಮಿಸಬೇಕು ಎಂದರು.
ದೇಶದಾದ್ಯಂತ 96 ಕೋಟಿ ಮತದಾರರಿದ್ದು, 10 ಲಕ್ಷ ಮತಗಟ್ಟೆಗಳಲ್ಲಿ 57 ಲಕ್ಷ ಇವಿಎಂ ಗಳನ್ನು ಮತದಾನಕ್ಕಾಗಿ ಬಳಸಲಾಗುತ್ತಿದೆ. ಈ ಚುನಾವಣೆಯನ್ನು ಯಶಸ್ವಿಯಾಗಿ ಮುಗಿಸಲು ಚುನಾವಣಾ ಆಯೋಗವು ವ್ಯಾಪಾಕವಾಗಿ ಪ್ರಚಾರ ಮಾಡುತ್ತಿದೆ. ಹಾಗಿದ್ದಾಗ ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನ ಕರ್ತವ್ಯ. ಹಾಗಾಗಿ ಎಲ್ಲರೂ ಮತದಾನ ಮಾಡಿ ಹಾಗೂ ಬೇರೆಯವರಿಗೂ ಮಾತ ಹಾಕುವಂತೆ ಪ್ರೇರೇಪಿಸಿ ಚುನಾವಣೆಯನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇಕಡಾ 70 ರಷ್ಟು ಮತದಾನವಾಗಿದ್ದು, ಈ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚು ಮತದಾನ ಆಗುವ ನೀರಿಕ್ಷೆ ಇದೆ. ಮತದಾರರು ಚುನಾವಣೆಯ ಬಗ್ಗೆ ಯಾವುದೇ ಮಾಹಿತಿ ಬೇಕಿದ್ದರು ವೋಟರ್ ಹೆಲ್ಪಿಂಗ್ ಆಪ್ ಅನ್ನು ಡೌನ್ಲೋಡ್ ಮಾಡಿ ಅದರಿಂದ ಎಲ್ಲಾ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದರು.
ಮತದಾರರಿಗೆ ಯಾವುದೇ ರೀತಿಯ ದೂರು ಹಾಗೂ ದುಷ್ಕೃತ್ಯಗಳು ಕಂಡುಬoದಲ್ಲಿ ಸಿ-ವಿಜಿಲ್ ಆಪ್ ಮೂಲಕ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು. 85 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ಶೇಕಡಾ 40 ರಷ್ಟು ಅಂಗವಿಕಲತೆ ಹೊಂದಿರುವ ವಿಶೇಷಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವಿದ್ದು ಅದನ್ನು ಬಳಸಿಕೊಂಡು ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಹಿ ಎಕ್ಸ್ ಪೆÇೀರ್ಟ್ 37 ರ ಘಟಕ ಮುಖ್ಯಸ್ಥರಾದ ಗುರುಮೂರ್ತಿ ಜೆ.ಸಿ, ಘಟಕ 42 ರ ಮುಖ್ಯಸ್ಥರಾದ ಸಂತೋಷ್ ಕುಮಾರ್, ವ್ಯವಸ್ಥಾಪಕ ನಿರ್ದೇಶಕ ಶುಭ ದೇವರಾಜೇ ಅರಸ್ ಹಾಗೂ ಕಾರ್ಮಿಕ ಕಲ್ಯಾಣಧಿಕಾರಿಯಾದ ಚೈತ್ರ ಸೇರಿದಂತೆ ಸಂಸ್ಥೆಯ ಕಾರ್ಮಿಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.