ಸಿರಿಗೆರೆ ಶ್ರೀಗಳ ಆಶೀರ್ವಾದ ಪಡೆದ ಡಾ.ಪ್ರಭಾ ಮಲ್ಲಿಕಾರ್ಜುನ್

ಸಂಜೆವಾಣಿ ವಾರ್ತೆ
ದಾವಣಗೆರೆ.ಮಾ.೨೬; ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಾ. ಪ್ರಭಾ ಮಲ್ಲಿಕಾರ್ಜುನ  ಸಿರಿಗೆರೆಯತರಳಬಾಳು ಜಗದ್ಗುರು ಬೃಹನ್ಮಠದ  ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ಭೇಟಿಯಾಗಿ ಪರಮಪೂಜ್ಯರ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಪುತ್ರ ಸಮರ್ಥ ಶಾಮನೂರು, ಪುತ್ರಿ ಶ್ರೇಷ್ಠ ಶಾಮನೂರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕೆ.ಜಿ ಬಸವನ ಗೌಡ್ರು, ಎಸ್ ಎಸ್ ಹೈಟೆಕ್ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಬಿ.ಎಸ್ ಪ್ರಸಾದ್, ವೈದ್ಯಕೀಯ ನಿರ್ದೇಶಕರಾದ ಡಾ. ಅರುಣ್ ಅಜ್ಜಪ್ಪ, ಬಾಪೂಜಿ ಮಕ್ಕಳ ಆಸ್ಪತ್ರೆಯ ಡಾ. ಮೂಗನಗೌಡ ಪಾಟೀಲ್ ಸೇರಿದಂತೆ ಕುಟುಂಬಸ್ಥರು ಉಪಸ್ಥಿತರಿದ್ದರು.