ಕುಡಿಯುವ ನೀರು ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಚನೆ
ಸಂಜೆವಾಣಿ ವಾರ್ತೆ
ಲಿಂಗಸೂಗೂರು.ಮಾ.೨೬- ತಾಲೂಕಿನ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಕುಡಿಯುವ ನೀರಿನ ಕೆರೆಗೆ ಭೇಟಿ ನೀಡಿದ ರಾಯಚೂರು ಕೊಪ್ಪಳ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಶರಣಗೌಡ ಪಾಟೀಲ ಬಯ್ಯಾಪುರ ರವರು ಭೇಟಿ ನೀಡಿ, ಆಧಿಕಾರಿಗಳ ಜೊತೆ ಮಾಹಿತಿ ಪಡೆದುಕೊಂಡರು.
ಈಗಾಗಲೇ ಎಲ್ಲಾಕಡೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ತೊಂದರೆ ಅನುಭವಿಸುವಂತಾಗಿದೆ ಆದರೆ ಲಿಂಗಸುಗೂರು ಪಟ್ಟಣದ ಸಾರ್ವಜನಿಕರಿಗೆ ಸರಿಯಾಗಿ ಶುದ್ದ ಕುಡಿಯುವ ನೀರು ಸರಬರಾಜು ಮಾಡಲು ಮುಂದಾಗಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಶರಣಗೌಡ ಪಾಟೀಲ ಬಯ್ಯಾಪುರ ಸೂಚಿಸಿದರು.
ಇಂದು ಲಿಂಗಸೂಗೂರ ಪಟ್ಟಣದ ಪುರಸಭೆ ವ್ಯಾಪ್ತಿಗೆ ಒಳಪಡುವ ಕಾಳಾಪೂರ ಮೇನ್ ಕೆನಲ್ ಕುಡಿಯುವ ನೀರಿನ ಸಮಸ್ಯೆ ಕುರಿತು ಕೆನಲ್ ಮತ್ತು ಕೆರೆಗಳನ್ನು ವೀಕ್ಷಣೆ ಮಾಡಿದರು ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ಶರಣಗೌಡ ಪಾಟೀಲ್ ಬಯ್ಯಪುರ ಸಾಹೇಬರು ವೀಕ್ಷಣೆ ಮಾಡಿ ಪಟ್ಟಣಕ್ಕೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಹೇಳಿದರು ಕನಿಷ್ಠ ಎರಡು ದಿನಕ್ಕೊಮ್ಮೆ ಆದ್ರೂ ನೀರು ಬಿಡಬೇಕು ಪಟ್ಟಣದ ಜನರಿಗೆ ಯಾವುದೇ ರೀತಿಯ ನೀರಿನ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು
ಈ ಸಂದರ್ಭದಲ್ಲಿ ಬೂಪ್ಪನಗೌಡ ಕರಡಕಲ್, ಮಲಣ್ಣ ವಾರದ, ಪಾಮಯ್ಯ ಮುರಾರಿ, ಗುಂಡಪ್ಪ ನಾಯಕ್, ಬಸವರಾಜ್ ಬಸಾಪುರ, ಚನ್ನರೆಡ್ಡಿ ಬಿರಾದರ್ ಹಾಗೂ ಪುರಸಭೆ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.