ಯೋಗಿ ನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ
ಗದಗ,ಮಾ26: ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಯೋಗಿ ನಾರೇಯಣ ಯತೀಂದ್ರ ( ಕೈವಾರ ತಾತಯ್ಯ )ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಯೋಗಿ ನಾರೇಯಣ ( ಕೈವಾರ ತಾತಯ್ಯ) ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರ ಶಿರೋಳ, ಜಿಲ್ಲಾಧಿಕಾರಿಗಳ ಕಚೇರಿಯ ಶಿರಸ್ತೇದಾರರಾದ ಮಹೇಶ ಕರಡಿಗುಡ್ಡ, ಶಶಿಕಲಾ ದೊಡ್ಡವಾಡಮಠ, ಸೇರಿದಂತೆ ವೀರಣ್ಣ ಮಠಪತಿ, ವಿನಾಯಕ ಬಾವಿಮನಿ, ಮಲ್ಲಿಕಾರ್ಜುನ ಪೂಜಾರ ಹಾಜರಿದ್ದರು.