ಸುಸೂತ್ರವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ
ಸಂಜೆವಾಣಿ ನ್ಯೂಸ್
ಮೈಸೂರು: ಮಾ.26:- ವಿದ್ಯಾರ್ಥಿ ಜೀವನದ ಮೊದಲ ತಿರುವಾಗಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸೋಮವಾರದಿಂದ ಆರಂಭಗೊಂಡಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಯು ಯಾವುದೇ ಗೊಂದಲ್ಲವಿಲ್ಲದೆ ಸುಸೂತ್ರವಾಗಿ ನಡೆದಿದೆ.
ನಗರದ 42 ಸೇರಿ ಜಿಲ್ಲೆಯ 132 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಎಲ್ಲಿಯೂ ಪರೀಕ್ಷೆ ನಕಲು ಮಾಡುವುದು ಮತ್ತು ಡಿಬಾರ್ ಆಗಿರುವ ಪ್ರಕರಣಗಳು ನಡೆದಿಲ್ಲ. ಹೀಗಾಗಿ ಮೊದಲ ದಿನ ಪರೀಕ್ಷೆ ಸುಸೂತ್ರವಾಗಿ ಯಶಸ್ವಿಯಾಗಿ ನಡೆದಿದೆ.
40,333 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಇದರಲ್ಲಿ 392 ಪ್ರಥಮ ಬಾರಿ ಪರೀಕ್ಷೆ ಎದುರಿಸುತ್ತಿರುವ ಮತ್ತು ಮತ್ತು 54 ಪುನರ ವರ್ತಿತ ವಿದ್ಯಾರ್ಥಿಗಳು ಸೇರಿ 446 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಹೂ ನೀಡಿ ಸ್ವಾಗತಿಸಿದ ಶಿಕ್ಷಕರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನವಾದ್ದರಿಂದ ಕೆಲವು ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಹೂಗಳನ್ನು ನೀಡಿ ಸ್ವಾಗತಿಸಲಾಯಿತು. ಕೆಲವು ಪರೀಕ್ಷೆಗೆ ಬೇಕಾದ ಅಗತ್ಯ ವಸ್ತುಗಳನ್ನು ಮಕ್ಕಳಿಗೆ ವಿತರಿಸಿದರು. ವಿವಿಧ ಸಂಘಟನೆಗಳು ರ?ಯದಿಂದ ಪರೀಕ್ಷೆ ಎದುರಿಸುವಂತೆ ಆತ್ಮವಿಶ್ವಾಸ ತುಂಬಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಚ್.ಕೆ.ಪಾಂಡು ಸೇರಿದಂತೆ ಆಯಾ ಬಿಇಓಗಳು ಕೆಲ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಪಾರದರ್ಶಕ ಮತ್ತು ಪ್ರಮಾಣಿಕ ಪರೀಕ್ಷೆ ನಡೆಸಲು ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ: ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ನಿಷೇಧಿಸಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನಗಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು.
ವಾಹನ ವ್ಯವಸ್ಥೆ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎದುಸುತ್ತಿರುವ ವಿದ್ರ?ಥಿಗಳಿಗೆ ಕೆಎಸ್‍ಆರ್‍ಸಿ ವತಿಯಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪರೀಕ್ಷಾ ಪ್ರವೇಶ ಪತ್ರ ತೋರಿಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಿದರು.
ಬಸ್ ವ್ಯವಸ್ಥೆ ಇಲ್ಲದಿರುವ ಕಡೆಗಳಲ್ಲಿ ಶಿಕ್ಷಕರಿಂದ ವಾಹನ ವ್ಯವಸ್ಥೆ ಮಾಡಲಾಗಿತ್ತು. ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಎಸ್ಸೆಸ್ಸೆಲ್ಸಿ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ಬಾರಿ ಮಧ್ಯಾಹ್ನದ ಬಿಸಿಯೂಟ ವಿತರಿಸಲಾಯಿತು.
ಇಜಾಬ್ ವಿವಾದವಿಲ್ಲ: ಕಳೆದ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸರ?ಭದಲ್ಲಿ ರಾಜ್ಯ ರ?ಕಾರ ಜಾರಿಗೆ ತಂದಿದ್ದ, ಇಜಾಬ್ ನಿಷೇಧದ ಹೊಸ ನಿಯಮದಿಂದ ಹಲವು ಮುಸ್ಲಿಂ ವಿದ್ರ?ಥಿನಿಯರು ಪರೀಕ್ಷೆಗೆ ಗೈರಾಗಿದ್ದರು. ಆದರೆ, ಈ ಬಾರಿ ನಿಯಮದ ಈ ವಿವಾದ ಮುನ್ನಲೆಗೆ ಬರದೆ ವಿದ್ರ?ಥಿನಿಯರು ಪರೀಕ್ಷೆ ಬರೆದರು.