ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವು ಭಸ್ಮ
ಸಂಜೆವಾಣಿ ವಾರ್ತೆ
ಚಾಮರಾಜನಗರ.ಮಾ.26- ಪ್ರತ್ಯೇಕ ಪ್ರಕರಣಗಳಲ್ಲಿ ಜಾನುವಾರುಗಳಿಗೆ ಸಂಗ್ರಹಿಸಿಟ್ಟಿದ್ದ ಮೇವಿನ ಮೆದೆಗಳು ಅಗ್ನಿ ಅವಘಡ ಉಂಟಾಗಿ ಸುಟ್ಟುಕರಕಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಕರಕಲ ಮಾದಹಳ್ಳಿ ಗ್ರಾಮದಲ್ಲಿ ಶಶಿಕುಮಾರ್ ಎಂಬವರ ಜಮೀನಿನಲ್ಲಿ ಜಾನುವಾರುಗಳ ಮೇವಿಗಾಗಿ 3ಕ್ಕೂ ಹೆಚ್ಚು ಮೆದೆಗಳನ್ನು ಸಂಗ್ರಹಿಸಿಡಲಾಗಿತ್ತು. ಆದರೆ, ಯಾರೋ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎಲ್ಲವೂ ಧಗಧಗಿಸಿ ಸುಟ್ಟು ಕರಕಲಾಗಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ಥಳೀಯರು ಬೆಂಕಿಯನ್ನು ನಂದಿಸಿ ಪಕ್ಕದಲ್ಲೇ ಇದ್ದದನದ ಕೊಟ್ಟಿಗೆಗೆ ಬೆಂಕಿ ಹರಡದಂತೆ ತಡೆದಿದ್ದಾರೆ.
ತೆರಕಣಾಂಬಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇನ್ನು, ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ ಗ್ರಾಮದಲ್ಲಿ ಪ್ರಕಾಶ್ ಎಂಬವರ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಮೇವಿನ ಮೆದೆಗೆ ಆಕಸ್ಮಿಕ ಬೆಂಕಿ ತಗುಲಿದ್ದು ಎರಡು ಹುಲ್ಲಿನ ಮೆದೆಗಳು ಭಸ್ಮವಾಗಿದೆ. ಮಾಹಿತಿ ಅರಿತ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.