ಬಗರ್ ಹುಕುಂ ಸಾಗುವಳಿದಾರರಿಗೆ  ಹಕ್ಕು ಪತ್ರ ವಿತರಿಸಲು ಮನವಿ.
ಸಂಜೆವಾಣಿ ವಾರ್ತೆ
ಬಳ್ಳಾರಿ, ಮಾ.27: ಎ ಐ ಕೆ ಕೆ ಎಂ ಎಸ್ ರೈತ ಸಂಘಟನೆ ವತಿಯಿಂದ ಬಗರ್ ಹುಕುಂ  ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಕೋರಿ ಇತ್ತೀಚೆಗೆ ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ತಿಮ್ಮನಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.
ಬಳ್ಳಾರಿ ತಾಲೂಕಿನಲ್ಲಿ ಸುಮಾರು 40 ರಿಂದ 50 ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ತಮ್ಮ ಜೀವನ ಸಾಗಿಸುವುದಕ್ಕಾಗಿ ಅಕ್ರಮವಾಗಿ ಸಾಗುವಳಿ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರ ಹಕ್ಕು ಪತ್ರ ನೀಡುವುದಾಗಿ ಭರವಸೆ ನೀಡಿ, ಅವರಿಂದ ಅರ್ಜಿಗಳನ್ನು ಸ್ವೀಕಸಿ ಸುಮಾರು ವರ್ಷಗಳೇ ಕಳೆದಿವೆ, ಆದರೆ ಈ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿರುವುದು ಕೆಲವೊಮ್ಮೆ, ಸ್ಥಗಿತಗೊಂಡಿರುವುದರಿಂದ, ಈ ಭೂಮಿಯ ಮೇಲೆ ಅವಲಂಬಿತವಾಗಿರುವ ಸಾಕಷ್ಟು ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಈ ರೈತರು ತಮ್ಮ ಜೀವನ ಸಾಗಿಸಲು ಬೇರೆ ಯಾವುದೇ ಭೂಮಿಯು ಇವರಿಗೆ ಇಲ್ಲವಾಗಿದೆ, ಈಗ ಇರುವ ಭೂಮಿಗೆ ಹಕ್ಕು ಪತ್ರ ಇಲ್ಲದ್ದರಿಂದ ಇವರಿಗೆ ಯಾವುದೇ ರೀತಿಯ ಸರ್ಕಾರಿ ಸೌಲಭ್ಯಗಳು ಮತ್ತು ಬ್ಯಾಂಕ್ ಸೌಲಭ್ಯಗಳು ಸಿಗದಂತಾಗಿವೆ. ಹಾಗಾಗಿ ಈ ಕೂಡಲೇ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಿಸಲು ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಗೋವಿಂದ್ , ಉಪಾಧ್ಯಕ್ಷ ಈರಣ್ಣ,  ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ಜಿಲ್ಲಾ ಸಮಿತಿ ಸದಸ್ಯರಾದ ಲಿಂಗಪ್ಪ, ಮಲ್ಲಪ್ಪ, ದಸ್ತಗಿರಿ, ಬಸವರಾಜ್, ಮಾರೆಪ್ಪ, ರಮೇಶ್, ಧನರಾಜ್, ನಾಯ್ಕಪ್ಪ, ಮಲ್ಲಿಕಾರ್ಜುನ ಸೇರಿದಂತೆ ಇತರರು ಇದ್ದರು.