7ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಅಫಜಲಪೂರ: ಮಾ.25:ತಾಲ್ಲೂಕಿನ ಭೋಸಗಾ ಗ್ರಾಮದಲ್ಲಿ
ಶ್ರೀ ಹೊನ್ನಲಿಂಗೇಶ್ವರ ಹಳೆ ವಿದ್ಯಾರ್ಥಿಗಳ ಸಂಘದ ಮೂರನೇ ವರ್ಷದ ವರ್ಷಾಚರಣೆ ಕಾರ್ಯಕ್ರಮದ ಅಂಗವಾಗಿ 7ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಜರುಗಿತು.
ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ, ಹತ್ತನೇ ತರಗತಿ, ಏಳನೇ ತರಗಲಿಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನದಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಹಾಗೂ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದವರಿಗೆ ಮತ್ತು ಸರ್ಕಾರಿ ಸೇವೆಯಲ್ಲಿ ಮುಂಬಡ್ತಿ ಹೊಂದಿದವರಿಗೆ, ಮತ್ತು ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಎಸ್.ಡಿ.ಎಮ್.ಸಿ. ಅಧ್ಯಕ್ಷರು, ಸದಸ್ಯರು, ಶ್ರೀ ಹೊನ್ನಲಿಂಗೇಶ್ವರ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು, ಸದಸ್ಯರು, ಗ್ರಾಮದ ಹಿರಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.