ಇಂದಿನಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭ
ಕಲಬುರಗಿ,ಮಾ.25: ಜಿಲ್ಲೆಯಾದ್ಯಂತ ಇಂದಿನಿಂದ ಏಪ್ರಿಲ್ 6 ರ ವರೆಗೆ ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ಒಟ್ಟು 124 ಪರೀಕ್ಷಾ ಕೇಂದ್ರಗಳಲ್ಲಿಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಿವೆ.ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಇಂದು ವಿದ್ಯಾರ್ಥಿಗಳು ಸಡಗರದಿಂದ ಪರೀಕ್ಷೆಗಳಿಗೆ ಹಾಜರಾದರು.
ಪರೀಕ್ಷೆಯನ್ನು ಶಾಂತಿಯುತಹಾಗೂ ಸುಸೂತ್ರವಾಗಿ ನಡೆಸಲು
ಅನುಕೂಲವಾಗುವಂತೆ ಕಲಬುರಗಿಜಿಲ್ಲೆಯಲ್ಲಿನ ಎಲ್ಲಾ ಎಸ್.ಎಸ್.
ಎಲ್.ಸಿ. ವಾರ್ಷಿಕ ಪರೀಕ್ಷಾ ಕೇಂದ್ರಗಳಸುತ್ತಮುತ್ತಲಿನ 200 ಮೀಟರ್
ಪ್ರದೇಶವನ್ನು ನಿಷೇಧಿತ ಪ್ರದೇಶವೆಂದುಘೋಷಿಸಿ ಕಲಬುರಗಿ ಜಿಲ್ಲಾಧಿಕಾರಿ
ಬಿ. ಫೌಜಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್‍ಅಧಿನಿಯಮ 1963ರ ಕಲಂ-35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿಸಂಬಂಧಪಟ್ಟ ಪರೀಕ್ಷಾ ಕೇಂದ್ರದಮುಖ್ಯ ಅಧೀಕ್ಷಕರು, ಸಿಬ್ಬಂದಿ ವರ್ಗದವರನ್ನು ಹೊರತುಪಡಿಸಿ,ಯಾವುದೇ ಬೇರೆ ವ್ಯಕ್ತಿಗಳು ಪರೀಕ್ಷಾಕೇಂದ್ರಗಳ ಸುತ್ತಮುತ್ತಲಿನ 200ಮೀಟರ್ ಪ್ರದೇಶದಲ್ಲಿ ಮೊಬೈಲ್
ಫೋನ್, ಪೇಜರ್, ಬ್ಲ್ಯೂಟೂತ್ ಹಾಗೂವೈರಲೆಸ್ ಸೆಟ್‍ಗಳು ಹಾಗೂ ಮತ್ತಿತರ ಎಲೆಕ್ಟ್ರಾನಿಕ್ಸ್ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.