ಲೋಕಸಭಾ ಚುನಾವಣೆ: ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಜಿ.ಪಂ. ಸಿಇಒ ರಿಷಿ ಆನಂದ
ಸಂಜೆವಾಣಿ ವಾರ್ತೆ,
ವಿಜಯಪುರ ಮಾ.25:ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ನಿಡಗುಂದಿ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-50ರ ಯಲಗೂರು ಕ್ರಾಸ್ ಬಳಿ ಚೆಕ್ ಪೆÇೀಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಡಗುಂದಿ ತಾಲೂಕು ವ್ಯಾಪ್ತಿಯ ಯಲಗೂರು ಕ್ರಾಸ್ ಬಳಿ ಚೆಕ್ ಪೆÇೀಸ್ಟ್ ಆರಂಭಿಸಲಾಗಿದೆ.
ವಿಜಯಪುರ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲು ಜಿಲ್ಲಾ ಗಡಿ ಭಾಗ ಚೆಕ್ ಪೆÇೀಸ್ಟ್ ಆರಂಭಿಸಲಾಗಿದೆ. ಕಂದಾಯ, ಪೆÇೀಲಿಸ್, ಕೆಬಿಜೆಎನ್ ಎಲ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ರಿಷಿ ಆನಂದ ಅವರು ಮಾತನಾಡಿ, ಲೋಕಸಭೆ ಚುನಾವಣಾ ನಿಮಿತ್ತ ಮಾದರಿ ನೀತಿ ಸಂಹಿತೆ ಜಾರಿಗೆ ಯಾಗಿದ್ದು, ಜಿಲ್ಲೆಯಿಂದ ಹೊರಹೋಗುವ ಮತ್ತು ಆಗಮಿಸುವ ಎಲ್ಲ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸಬೇಕು. ಹಣ, ಮದ್ಯ, ದಾಖಲೆ ಇಲ್ಲದ ವಸ್ತುಗಳು ಕಂಡು ಬಂದರೆ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತಂದು ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತಿ ವಾಹನ ತಪಾಸಣೆ ಮಾಡಿದ ವರದಿಯನ್ನು ವಹಿಯಲ್ಲಿ ದಾಖಲಿಸಬೇಕು ಎಂದು ಚೆಕ್ ಪೆÇೀಸ್ಟ್ ಸಿಬ್ಬಂದಿಯವರಿಗೆ ಸೂಚಿಸಿದರು.
ಇದೇ ವೇಳೆ ನೋಂದಣಿ ಮಾಡಿದ ವಾಹನಗಳ ವಿವರಗಳನ್ನು ಖುದ್ದಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಚೆಕ್ ಪೆÇೀಸ್ಟ್ ಸಿಬ್ಬಂದಿ ಉಪಸ್ಥಿತರಿದ್ದರು.