ಮಾದರಿ ನೀತಿ ಸಂಹಿತೆ ಉಲ್ಲಂಘನೆ: 178 ಪ್ರಕರಣ ದಾಖಲು
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮಾ.೨೫; ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ತೀವ್ರ ನಿಗಾ ವಹಿಸಲಾಗಿದ್ದು, ಪೋಲಿಸ್ ಇಲಾಖೆಯಿಂದ 47 ಹಾಗೂ ಅಬಕಾರಿಯಿಂದ 131 ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 178 ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬAಧ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಅಂಚೆ ಮತಪತ್ರದ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಚುನಾವಣಾ ಅಕ್ರಮ ಚಟುವಟಿಕೆ ನಿಗ್ರಹಿಸಲು ಜಿಲ್ಲೆಯಾದ್ಯಂತ 36 ಚೆಕ್‌ಪೋಸ್ಟ್ಗಳು ಕಾರ್ಯನಿರ್ವಹಿಸುತ್ತಿವೆ. ದಿನದ 24 ಗಂಟೆಯೂ ಚೆಕ್‌ಪೋಸ್ಟ್ಗಳಲ್ಲಿ ಅಧಿಕಾರಿ, ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಚೆಕ್‌ಪೋಸ್ಟ್ಗಳಲ್ಲಿ ತಪಾಸಣೆ ವೇಳೆಯಲ್ಲಿ ಇಲ್ಲಿಯವರೆಗೆ ರೂ.1.87,93,000/- ನಗದು ವಶ ಪಡಿಸಿಕೊಳ್ಳಲಾಗಿದೆ. 108 ಸೀರೆಗಳ ವಶ, ಅಬಕಾರಿ ಇಲಾಖೆಯಿಂದ 22,241.75 ಲೀಟರ್ ಮದ್ಯ ಹಾಗೂ ಪೊಲೀಸ್ ಇಲಾಖೆಯಿಂದ 265.490 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾಣಾಧಿಕಾರಿಗಳ ಕಾರ್ಯಾಲಯ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣಾಧಿಕಾರಿಗಳ ಕಾರ್ಯಾಲಯ ತೆರೆಯಲಾಗಿದ್ದು, ಇದೇ ಮಾರ್ಚ್ 28 ರಿಂದ ನಾಮಪತ್ರಗಳ ಸ್ವೀಕಾರ ಕಾರ್ಯ ನಡೆಯಲಿದೆ. ಇದಕ್ಕೂ ಪೂರಕವಾಗಿ ಬೇಕಾದಂತ ಅರ್ಜಿ ನಮೂನೆಗಳು ಕಚೇರಿಯಲ್ಲಿ ಲಭ್ಯವಿದ್ದು, ಅಗತ್ಯವಿರುವವರು ಕಚೇರಿಯ ಅವಧಿಯಲ್ಲಿ ಭೇಟಿ ಮಾಡಿ ಪಡೆಯಬಹುದಾಗಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬAಧಪಟ್ಟAತೆ ಈಗಾಗಲೇ ಚುನಾವಣಾ ಆಯೋಗವು ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರನ್ನು ನೇಮಕ ಮಾಡಿದೆ. ನಾಮಪತ್ರ ಸಲ್ಲಿಕೆಯ ಕಡೆಯ ದಿನಾಂಕದೊಳಗೆ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಹೇಳಿದರು.ಮತದಾನ ಹೆಚ್ಚಳಕ್ಕೆ ಕ್ರಮ: ಸ್ವೀಪ್ ಕಾರ್ಯದಡಿಯಲ್ಲಿ ಜಿಲ್ಲೆಯ ಎಲ್ಲ ಮತದಾರರು ಮತಗಟ್ಟೆಗೆ ತೆರಳಿ ಮತ ಚಲಾಯಿಸುವಂತೆ ಜಿಲ್ಲಾಡಳಿತ ವತಿಯಿಂದ ಮನವಿ ಮಾಡಲು ಕ್ರಮಕೈಗೊಂಡಿದ್ದು, ಪ್ರತಿಯೊಬ್ಬ ಮತದಾರರಿಗೂ ವೈಯಕ್ತಿಕ ಪತ್ರ ಮುಖೇನ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ಪ್ರಜಾಪ್ರಭುತ್ವದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.ಇದರ ಜೊತೆಗೆ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳ ವ್ಯಾಪ್ತಿಯಲ್ಲಿ ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ, ಮತದಾನ ಪ್ರಮಾಣ ಹೆಚ್ಚಳಕ್ಕೆ ಅಗತ್ಯ ಕ್ರಮವಹಿಸಲಾಗಿದೆ ಎಂದರು.