ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಬೆಲೆ ಕಟ್ಟಬೇಕಾಗುತ್ತದೆ. ರವಿಕುಮಾರ್
ಸಂಜೆವಾಣಿ ವಾರ್ತೆ
ಹೊಸಪೇಟೆ ಮಾ24: ಲೋಕಸಭಾ ಫಲಿತಾಂಶ ಬಂದ ಬಳಿಕ ರಾಜ್ಯ ಸರ್ಕಾರ ಇರುತ್ತೋ ಇಲ್ಲವೋ ನೋಡಬೇಕು. ಎಂದು ವಿಧಾನಪರಿಷತ್‍ನ ಸಚೇತಕ ಎನ್. ರವಿಕುಮಾರ್ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಫಲಿತಾಂಶ ಬಂದ ಬಳಿಕ ರಾಜ್ಯ ಸರ್ಕಾರ ಉಳಿಯುತ್ತದೆಯೋ, ಇಲ್ಲವೋ ಎಂಬುದನ್ನು ಕಾದು ನೋಡಬೇಕು. ಫಲಿತಾಂಶದ ಹೊಣೆಯನ್ನು ಹೊರಬೇಕಿದೆ ಎಂದರು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು. ಈಗಾಗಲೇ ಮಾಜಿ ಸಚಿವ ಮಾಧುಸ್ವಾಮಿ ಮತ್ತು ಸಂಸದ ಕರಡಿ ಸಂಗಣ್ಣ ಅವರ ಮನವೊಲಿಸಲಾಗಿದೆ. ಸ್ವತಃ ಬಿ.ಎಸ್. ಯಡಿಯೂರಪ್ಪನವರೇ ಮಾಧುಸ್ವಾಮಿ ಅವರ ಮನೆಗೆ ತೆರಳಿ ಮನವೊಲಿಸಿದ್ದಾರೆ. ಈಶ್ವರಪ್ಪ ಅವರದ್ದೇ ನಮಗೆ ಕಗ್ಗಂಟಾಗಿದ್ದು, ಅವರನ್ನೂ ಮನವೊಲಿಸುವ ಪ್ರಯತ್ನ ಮಾಡುತ್ತೇವೆ. ಸಂಧಾನದ ಬಳಿಕ, ಮಾಧುಸ್ವಾಮಿ, ಕರಡಿ ಸಂಗಣ್ಣ ಅವರು ಬಿಜೆಪಿಗೆ ಸಪೋರ್ಟ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಕರಡಿ ಸಂಗಣ್ಣ ಅವರ ಮೆನೆಗೆ ನಾನೇ ಖುದ್ದು ಹೋಗಿದ್ದೆ, ಅಸಮಾಧಾನ ಸರಿಪಡಿಸಿ ಬಂದಿದ್ದೇವೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸೋದಕ್ಕೆ ಕೆಲಸ ಮಾಡುತ್ತೇವೆ ಅಂತ ಒಪ್ಪಿಕೊಂಡಿದ್ದಾರೆ. ಉಳಿದ ಕ್ಷೇತ್ರಗಳಿಗೆ ಇವತ್ತು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದರು.
ಗುಬ್ಬಿ ಶಾಸಕ ಶ್ರೀನಿವಾಸ್ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ರೆ ಸಿಎಂ ಸ್ಥಾನ ಕಳೆದುಕೊಳ್ತಾರೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಂ ಸ್ಥಾನ ಕಳೆದುಕೊಳ್ತಾರೆಂಬ ಚರ್ಚೆ ನಡೀತಿದೆ. 136 ಸೀಟು ಗೆದ್ದಾಗಿನಿಂದ ಕಾಂಗ್ರೆಸ್ ನಲ್ಲಿ ಗೊಂದಲ ಸೃಷ್ಟಿ ಆಗಿದೆ. ಕಾಂಗ್ರೆಸ್ ಗೆದ್ದಾಗಲೇ ಸಿಎಂ ಯಾರಾಗಬೇಕು ಎನ್ನುವುದರ ಬಗ್ಗೆಯೇ ಮೂರ್ನಾಲ್ಕು ದಿನ ಚರ್ಚೆ ನಡೆಯಿತು. ಇದನ್ನೇಲ್ಲ ಗಮನಿಸಿದರೆ, ಕಾಂಗ್ರೆಸ್‍ನಲ್ಲಿ ಗೊಂದಲ ಸ್ಪಷ್ಟವಾಗಿದೆ,
ರಾಜ್ಯದಲ್ಲಿ ಕುಡಿಯುವ ನೀರಿನ ಹಾಹಾಕಾರ ಇದೆ. ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ರಾಜ್ಯ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಬಳ ಕೊಡೋದಕ್ಕೂ ಹಣ ಇಲ್ಲದಾಗಿದೆ. ಸರ್ಕಾರದ ಬಳಿ ಅಕ್ಕಿ ಹಣ ಕೊಡೋದಕ್ಕೆ ಇಲ್ಲ, ಗ್ಯಾರಂಟಿಗಳಿಗೆ ಹಣ ಕೊಡುತ್ತಿಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರೇ ಈ ಸರ್ಕಾರದ ಪಸೆರ್ಂಟೇಜ್ ಬಗ್ಗೆ ಆರೋಪ ಮಾಡಿದ್ದಾರೆ. ಸರ್ಕಾರದ ಬಳಿ ಹಣ ಇಲ್ಲವೇ ಇಲ್ಲ. ಸರ್ಕಾರ ಅಧೋಗತಿಗೆ ಇಳಿದಿದೆ ಎಂದು, ಪ್ರಧಾನಿ ಮೋದಿ ಅವರು ಆಡಳಿತಕ್ಕೆ ಬಂದ ಮೇಲೆ ದೇಶದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಜಗತ್ತಿನ ದೇಶಗಳು ಆರ್ಥಿಕ ಸ್ಥಿತಿ ಸುಧಾರಿಸಲು ಹಣಗಾಡುತ್ತಿವೆ ಎಂದರು.
ಶಾಸಕ ಜನಾರ್ದನ ರೆಡ್ಡಿ ಅವರು ಯಾವತ್ತಿದ್ರೂ ಬಿಜೆಪಿ ಪರ ಇದ್ದಾರೆ. ಅಖಂಡ ಜಿಲ್ಲೆ ಅಭಿವೃದ್ಧಿ ಮಾಡಿದ್ದಾರೆ, ಜನಾರ್ದನ ರೆಡ್ಡಿ ಪಕ್ಷದ ಹಿತೈಷಿ ಆಗಿದ್ದಾರೆ. ಅಮಿತ್ ಶಾ, ಜೆ.ಪಿ. ನಡ್ಡಾ ಅವರು ಕರೆದು ಮಾತಾಡಿದ್ದಾರೆ. ಅವರು ಬಿಜೆಪಿಗೆ ಬಂದ್ರೆ ಬೆಂಬಲ ಸಿಗುತ್ತದೆ. ಜನಾರ್ದನ ರೆಡ್ಡಿ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದರು. ಮುಖಂಡರಾದ ಕಿಚಿಡಿ ಕೊಟ್ರೇಶ್, ಮಧುರಚನ್ನಶಾಸ್ತ್ರಿ ಈ ಸಂದರ್ಭದಲ್ಲಿದ್ದರು