ವಿದ್ಯುತ್ ತಗುಲಿ ವ್ಯಕ್ತಿ ಸಾವು
ಕಲಬುರಗಿ,ಮಾ.24-ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಸಂತೋಷ ಕಾಲೋನಿಯಲ್ಲಿ ನಡೆದಿದೆ.
ಭಗವಂತರಾಯ ಕೋಳಕೂರ ಮೃತಪಟ್ಟವರು.
ಬಾತ್-ರೂಮಿಗೆ ಹೋಗಿ ಸ್ನಾನ ಮಾಡಿ ಬರುವಾಗ ಲೈಟ್ ಸ್ವಿಚ್ ಆಫ್ ಮಾಡುವ ವೇಳೆ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಜೇವರ್ಗಿಯ ರೈತ ಸೇವಾ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಇವರು ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ಮೃತರ ಪತ್ನಿ ಪಾರ್ವತಿ ಕೋಳಕೂರ ಅವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.