ಮಾ.27ಕ್ಕೆ ಚೆಸ್ಕಾಂಗೆ ರೈತರ ಮುತ್ತಿಗೆ
ಸಂಜೆವಾಣಿ ನ್ಯೂಸ್
ಮೈಸೂರು:ಮಾ.24:- ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೆ ಒತ್ತಾಯಿಸಿ ಇದೇ ಮಾ.26 ರ ಮಂಗಳವಾರ ಬೆಳಿಗ್ಗೆ 11.30ಗಂಟೆಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ರೈತರು ನಗರದ ಹಿನಕಲ್‍ನಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಪಂಪ್ ಸೆಟ್ ಗಳಿಗೆ 10 ಗಂಟೆಗಳ ವಿದ್ಯುತ್ ಪೂರೈಕೆ ಮಾಡಬೇಕೆಂಬುದೂ ಸೇರಿದಂತೆ ಹಗಲು ವೇಳೆ ಸರ್ಕಾರದ ಆದೇಶದಂತೆ ಸಮರ್ಪಕ ವಿದ್ಯುತ್ ನೀಡುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ರೈತರಿಗೆ ಸೋಲಾರ್ ಪಂಪ್ಲೆಟ್ ಅನ್ನು ವೈಯಕ್ತಿಕವಾಗಿ ಅಳವಡಿಸಿಕೊಳ್ಳಲು ಇಲಾಖೆ ಪ್ರೇರೇಪಿಸುತ್ತಿರುವುದು ಸರಿಯಲ್ಲ. ಕಳೆದ ಸಾಲಿನಲ್ಲಿ ಇದ್ದಂತೆ ಅಕ್ರಮ ಸಕ್ರಮವನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಹೊಸ ವಿದ್ಯುತ್ ಸಂಪರ್ಕ ಪಡೆಯಲು ರೈತರಿಗೆ ಸಾಧ್ಯವಾಗುತ್ತಿಲ್ಲ ಸರ್ಕಾರದ ಆದೇಶವಿದೆ ಎಂದು ಯಾವುದೇ ನೋಂದಣಿಯನ್ನು ಮಾಡಿಕೊಳ್ಳದೆ ಸ್ವಂತಕ್ಕೆ ಎರಡು ಮೂರು ಲಕ್ಷವನ್ನು ಕಟ್ಟಬೇಕು ಮತ್ತು ಸಂಪರ್ಕ ಪಡೆಯಲು ಹೇಳುತ್ತಿದ್ದಾರೆ. ಇಲಾಖೆ ಕಾಡಂಚಿನ ಪ್ರದೇಶಗಳಿಗೆ ಸಮರ್ಪಕವಾಗಿ ಹಗಲು ವೇಳೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಟಿಸಿಗಳು ಸುಟ್ಟು ಹೋದರೆ 72 ಗಂಟೆಯಲ್ಲಿ ಆಗಬೇಕೆಂಬ ನಿಯಮವಿದರು ಇಲಾಖೆ ಕೆಳ ಹಂತದ ಅಧಿಕಾರಿಗಳು ತೀವ್ರ ವಿಳಂಬ ಮಾಡುತ್ತಿದ್ದಾರೆ. ಹೀಗಾಗಿ ಈ ಎಲ್ಲ ಅವ್ಯವಸ್ಥೆ ವಿರುದ್ಧ ಈ ಪ್ರತಿಭಟನೆ ನಡೆಯುತ್ತಿದೆ. ಒಂದು ವೇಳೆ ಅಧಿಕಾರಿಗಳು ಸ್ಪಂದಿಸಿದ್ದರೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಅಂಕನಹಳ್ಳಿ ತಿಮ್ಮಪ್ಪ, ಮೈಸೂರು ಜಿಲ್ಲಾ ಗೌರವಾಧ್ಯಕ್ಷ ಶಿವರುದ್ರಪ್ಪ, ಜಿಲ್ಲಾಧ್ಯಕ್ಷ ಹಾಡ್ಯ ರವಿ, ಸಂಘಟನಾ ಕಾರ್ಯದರ್ಶಿ ಕೊಂತಯ್ಯನ ಹುಂಡಿ ಮಹೇಶ, ಚಾಮರಾಜನಗರ ತಾಲೂಕ ಅಧ್ಯಕ್ಷ ಅರಳಿಕಟ್ಟೆ ಕುಮಾರ್, ಟಿ. ನರಸೀಪುರ ತಾಲೂಕು ಅಧ್ಯಕ್ಷ ಸುಜ್ಜಲೂರು ಜಯಸ್ವಾಮಿ ಉಪಸ್ಥಿರಿದ್ದರು.