ಮಾ.27ಕ್ಕೆ ರಾಜ್ಯಮಟ್ಟದ ವಿಚಾರ ಸಂಕಿರಣ
ಸಂಜೆವಾಣಿ ನ್ಯೂಸ್
ಮೈಸೂರು:ಮಾ.24:- ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ನಗರ ಘಟಕ, ಜೆಎಸ್‍ಎಸ್ ಮಹಿಳಾ ಕಾಲೇಜು ಕನ್ನಡ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಮಾ.27ರಂದು ಬೆಳಗ್ಗೆ 10.30ಕ್ಕೆ ಸರಸ್ವತಿಪುರಂನ ಜೆಎಎಸ್‍ಎಸ್ ಮಹಿಳಾ ಕಾಲೇಜು ನವಜ್ಯೋತಿ ಸಭಾಂಗಣದಲ್ಲಿ ದತ್ತಿ ಕಾರ್ಯಕ್ರಮದ ಅಂಗವಾಗಿ ವಚನ ಸಾಹಿತ್ಯ- ವರ್ತಮಾನದ ತಲ್ಲಣಗಳು ಕುರಿತು ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ.
ಈ ಕುರಿತು ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ನಗರ ಘಟಕದ ಅಧ್ಯಕ್ಷ ಮ.ಗು. ಸದಾನಂದಯ್ಯ ಮಾತನಾಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಸಿ.ಪಿ.ಕೃಷ್ಣಕುಮಾರ್ ವಹಿಸಲಿದ್ದಾರೆ ಎಂದರು. ಗೋಷ್ಠಿಗಳಲ್ಲಿ ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯ ನಿರ್ವಾಹಕ ಕಾರ್ಯದರ್ಶಿಗಳಾದ ಡಾ.ಸಿ.ಜಿ. ಬೆಟಸೂರಮಠ, ಸಂಸ್ಕೃತಿ ಚಿಂತಕರಾದ ಡಾ.ಜ್ಯೋತಿ ಶಂಕರ್, ಸರ್ಕಾರಿ ಮಹಾರಾಣಿ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಡಾ.ಬಿ.ವಿ.ವಸಂತಕುಮಾರ್, ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ. ಡಿ.ಎಸ್. ಗುರು ಮೊದಲಾದವರು ವಿವಿಧ ವಿಷಯ ಮಂಡಿಸಲಿದ್ದಾರೆ. ನಂತರ ಸಮಾರೋಪ ಭಾಷಣವನ್ನು ಖ್ಯಾತ ವಾಗ್ಮಿ ಪೆÇ್ರ.ಎಂ.ಕೃಷ್ಣಗೌಡ ಮಾತನಾಡಲಿದ್ದಾರೆ. ಈ ವೇಳೆ ಎಲ್. ಶಿವಲಿಂಗಪ್ಪ ಅವರ ವಚನಾಂತರಂಗ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಮಾ.24 ರಂದು ಪರಿಷತ್‍ನ ನಗರ ಘಟಕ ಹಾಗೂ ಸಪ್ತಸ್ವರ ಬಳಗದ ಸಂಯುಕ್ತಾಶ್ರಯದಲ್ಲಿ ಸಂಜೆ 5 ಗಂಟೆಗೆ ರಾಮಕೃಷ್ಣ ನಗರದ ರಮಾಗೋವಿಂದ ರಂಗಮಂದಿರದಲ್ಲಿ ಗಾನಯೋಗಿ ಪಂಚಾಕ್ಷರ ಗವಾಯಿ ಸ್ಮರಣಾರ್ಥ ವಚನ ಸಂಗೀತೋತ್ಸವ ಆಯೋಜಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಡಾ.ರೇಚಣ್ಣ, ಹೆಚ್.ಮುದ್ದುಮಲ್ಲೇಶ್, ಟಿ.ಎಸ್.ಕುಮಾರಸ್ವಾಮಿ, ಜಯಾಗೌಡ, ಡಾ.ಎಂ. ಪೂರ್ಣಿಮಾ ಉಪಸ್ಥಿತರಿದ್ದರು.