ಸಿಯುಕೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ
ಕಲಬುರಗಿ:ಸೆ.18:”ಕಲ್ಯಾಣ ಕರ್ನಾಟಕ ಪ್ರದೇಶದ ಹಿನ್ನಡೆಗೆ ಸಾಮಾಜಿಕ-ಆರ್ಥಿಕ, ರಾಜಕೀಯ ಮತ್ತು ಐತಿಹಾಸಿಕ ಅಂಶಗಳು ಕಾರಣವಾಗಿವೆ” ಎಂದು ಸಿಯುಕೆ ಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯಣ ಹೇಳಿದರು.
ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಅವರು ಮುಂದುವರೆದು ಮಾತನಾಡಿ “ನಿಜಾಮರ ಪ್ರತಿಗಾಮಿ ನೀತಿಗಳು ಮತ್ತು ಆಡಳಿತದಿಂದಾಗಿ ಈ ಪ್ರದೇಶವು ದೇಶದ ಇತರ ಭಾಗಗಳಿಗೆ ಹೋಲಿಸಿದರೆ ಹಿಂದುಳಿದಿದೆ. ನಿಜಾಮರ ಹಿಡಿತದಿಂದ ಹೊರಬರಲು ಅನೇಕ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಇಂದು ನಾವು ಆ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಬೇಕಾಗಿದೆ ಏಕೆಂದರೆ ಅವರ ತ್ಯಾಗದಿಂದ ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಈ ಭಾಗದ ಅಭಿವೃದ್ಧಿಗೆ ಶ್ರಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ವಿಶ್ವವಿದ್ಯಾಲಯಗಳು ಪ್ರದೇಶದ ಅಭಿವೃದ್ಧಿಗೆ ಹಣವನ್ನು ಖರ್ಚು ಮಾಡಲು ಸಾಧ್ಯವಿಲ್ಲ ಆದರೆ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಮೂಲಕ ಕೊಡುಗೆ ನೀಡಬಹುದು. ನಮ್ಮ ಶಿಕ್ಷಕರು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು ಮತ್ತು ಸೂಕ್ತ ಪರಿಹಾರಗಳನ್ನು ಒದಗಿಸಬೇಕು” ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕುಲಸಚಿವ ಪೆÇ್ರ.ಆರ್.ಆರ್.ಬಿರಾದಾರ್, ಹಣಕಾಸು ಅಧಿಕಾರಿ ಬಿ.ರಾಮದೊರೈ, ಪೆÇ್ರ.ಚನ್ನವೀರ ಆರ್.ಎಂ., ಪೆÇ್ರ.ಎಂ.ಎಸ್.ಪಾಸೋಡಿ, ಸಹಾಯಕ ಕುಲಸಚಿವ ಸುನೀಲ್ ಜಿ, ಬೋಧಕ ಮತ್ತು ಬೋಧಕೇತರ ಸದಸ್ಯರು ಉಪಸ್ಥಿತರಿದ್ದರು. ಡಾ.ಜಯದೇವಿ ಜಂಗಮಶೆಟ್ಟಿ ಮತ್ತು ಡಾ.ಸ್ವಪ್ನಿಲ್ ಚಾಪೇಕರ್ ರಾಷ್ಟ್ರಗೀತೆ ಹಾಡಿದರು. ಡಾ.ಗಣಪತಿ ಬಿ ಸಿನ್ನೂರ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.