ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ
ವಿಜಯಪುರ,ಸೆ.18: ಸಮಾಜದ ಅಭಿವೃದ್ಧಿಗೆ ವಿಶಿಷ್ಟವಾದ ಕಲೆ ಸಂಸ್ಕøತಿಯನ್ನು ಹೊಂದಿದ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಮಾಜ ಕಟ್ಟಲು ವಿಶ್ವಕರ್ಮ ಸಮುದಾಯದ ಶ್ರಮ ಅಗಾಧವಾಗಿದೆ. ಇಂತಹ ದಾರ್ಶನಿಕರ ಜಯಂತಿ ಆಚರಿಸುವ ಮೂಲಕ ಅವರ ಆದರ್ಶ ಹಾಗೂ ಶ್ರೇಷ್ಠತೆಗಳನ್ನು ಯುವ ಪೀಳಿಗೆ ಅನುಸರಿಸಬೇಕು ಎಂದು ಹೇಳಿದರು.
ಪೂಜ್ಯ ಮಹೀಂದ್ರ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಹಾರೊಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕÀ ರಾವಸಾಬ ಬಡಿಗೇರ ಅವರು ಉಪನ್ಯಾಸ ನೀಡಿದರು. ಭಾರತಿ ಕುಂದನಗಾರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ಎಚ್. ಮಮದಾಪೂರ ಅವರು ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಗ್ರೇಡ್-2 ತಹಸೀಲ್ದಾರ ಐ.ಎಚ್ ತುಂಬಗಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ ದೇವೆಂದ್ರ ಮಿರೇಕರ್ ಸೇರಿದಂತೆ ಸಮುದಾಯದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ವಿಶ್ವಕರ್ಮ ಭಾವಚಿತ್ರದ ಮೆರವಣಿಗೆಗೆ ಚಾಲನೆ:
ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ವಿಶ್ವಕರ್ಮ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಚಾಲನೆ ನೀಡಿದರು. ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ ವೃತ್ತ ಹಾಗೂ ಕನಕದಾಸ ವೃತ್ತದಿಂದ ಆಗಮಿಸಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದÀಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು.