ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ
ಕೊಲ್ಹಾರ:ಸೆ.18: ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದರ ಮೂಲಕ ಉತ್ತಮ ಆಡಳಿತ ನೀಡಿ ಜನತೆಯ ಮೆಚ್ಚುಗೆ ಪಾತ್ರರಾಗಿದ್ದಾರೆಯಲ್ಲದೇ ವಿಶ್ವ ನಾಯಕರೆನಿಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಜಗದೀಶ ಸುನಗದ, ಹೇಳಿದರು
ತಾಲೂಕಿನ ಬಳೂತಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟು ಹಬ್ಬದ ಅಂಗವಾಗಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಸಹಿತ ಅನೇಕರು ಉಪಸ್ಥಿತರಿದ್ದರು