ಚೇತನಾ ಚನಶೆಟ್ಟಿಗೆ ಕಾಯಕರತ್ನ ಪ್ರಶಸ್ತಿ
ಭಾಲ್ಕಿ:ಅ.4: ತಾಲೂಕಿನ ಸಮೂಹ ಸಂಪನ್ಮೂಲ ವ್ಯಕ್ತಿ (ಬಿಆರ್‍ಪಿ) ಚೇತನಾ ಸಂತೋಷಕುಮಾರ ಚನಶೆಟ್ಟಿಯವರಿಗೆ ಇತ್ತೀಚೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ, ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕøತಿಕ ಟ್ಟಸ್ಟ್ ವತಿಯಿಂದ ನಡೆದ ರಾಷ್ಟ್ರಮಟ್ಟದ ಬೆಳಕು ಸಂಭ್ರಮ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಕಾಯಕ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚೇತನಾ ಚನಶೆಟ್ಟಿಯವರು ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಬೆಳಕು ಸಾಹಿತ್ಯಿಕ, ಶೈಕ್ಷಣಿಕ ಮತ್ತು ಸಾಂಸ್ಕøತಿಕ ಟ್ರಸ್ಟ್‍ನ ಸಂಸ್ಥಾಪಕ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ.
ಈ ಕುರಿತು ಪ್ರಶಸ್ತಿ ಪತ್ರ ವಿತರಿಸಿದ ಅವರು, ಚೇತನಾ ಸಂತೋಷಕುಮಾರ ಚನಶೆಟ್ಟಿಯವರು ಕರ್ನಾಟಕ ನಾಡು ನುಡಿಗೆ ಹಾಗು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸಲಾಗಿದೆ. ಇವರ ಸೇವೆ ಹಿಗೆಯೇ ಮುಂದುವರೆಯಲಿ ಎಂದು ಆಶಿಸುತ್ತಾ ಇವರಿಗೆ ರಾಷ್ಟ್ರಮಟ್ಟದ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಭಿನಂದನೆ: ಬಿಆರ್‍ಪಿ ಚೇತನಾ ಸಂತೋಷಕುಮಾರ ರವರಿಗೆ ರಾಷ್ಟ್ರಮಟ್ಟದ ಕಾಯಕ ರತ್ನ ಪ್ರಶಸ್ತಿ ದೊರೆತಿದ್ದಕ್ಕೆ ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ, ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಲಕ್ಷ್ಮಿ.ಬಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪತ್ರಾಂಕಿತ ವ್ಯವಸ್ಥಾಪಕ ಶಿವಕುಮಾರ ಫುಲಾರಿ, ಇಸಿಓ ಮಲ್ಲಿಕಾರ್ಜುನ ಕನ್ನಾಳೆ, ಸಹದೇವ ಗೌಡಗಾವೆ, ಸಿಆರ್‍ಪಿ ಸಂತೋಷ.ಡಿ ಸೇರಿದಂತೆ ಶಿಕ್ಷಣ ತಜ್ಞರು ಹರ್ಷವ್ಯಕ್ತಪಡಿಸಿ ಅಭಿನಿಂದಿಸಿದ್ದಾರೆ.