ಪಾಲಾರ್‍ಚೆಕ್‍ ಪೋಸ್ಟ್ ಬಳಿ ದಾಖಲೆ ಇಲ್ಲದ 2.71 ಲಕ್ಷಕ್ಕೂ ಹೆಚ್ಚು ಹಣ ವಶ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ.24- ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಕಾರ್ಯನಿರ್ವಹಿಸುತ್ತಿರುವ ಹನೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ಪಾಲಾರ್ ಚೆಕ್‍ಪೋಸ್ಟ್ ಬಳಿ ಶುಕ್ರವಾರ ರಾತ್ರಿ 8 ಗಂಟೆ ಸಮಯದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2,71,670 ರೂ. ಗಳನ್ನು ಎಫ್.ಎಸ್.ಟಿತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಳೆದ (ಮಾರ್ಚ್ 22) ರಾತ್ರಿ 8 ಗಂಟೆ ವೇಳೆ ಪಾಲಾರ್ ಚೆಕ್‍ಪೋಸ್ಟ್ ಬಳಿ ಬೊಲೆರೋ ವಾಹನದಲ್ಲಿ ಶಿವಮೂರ್ತಿ ಎಂಬುವವರಿಂದ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ 2,71,670 ರೂ. ಗಳನ್ನು ಎಫ್.ಎಸ್.ಟಿ ತಂಡದ ಅಧಿಕಾರಿ ಶಾಂತರಾಜು, ಸಬ್ ಇನ್ಸ್‍ಪೆಕ್ಟರ್ ಜಯರಾಮ್ ಮತ್ತು ತಂಡದವರು ಜಪ್ತಿ ಮಾಡಿದ್ದಾರೆ.
ಹಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ, ಸಮಂಜಸ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಹಣ ವಶಕ್ಕೆ ಪಡೆದು ಕೊಳ್ಳೇಗಾಲದ ಉಪ ಖಜಾನೆಯಲ್ಲಿ ಇರಿಸಲಾಗಿದೆ.
ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ನಾಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.