ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆಅಧಿಕಾರಿಗಳು ಮುಂಜಾಗ್ರತೆ ವಹಿಸಿ:ಜಿಲ್ಲಾಧಿಕಾರಿ ಗೋವಿಂದರೆಡ್ಡಿ
ಬೀದರ. ಮಾ 24: ಬೇಸಿಗೆ ಇರುವುದರಿಂದ ಈಗ ಹೆಚ್ಚಿನ ಮದುವೆ ಹಾಗೂ ಸಾಮೂಹಿಕ ವಿವಾಹಗಳು ಹೆಚ್ಚಾಗಿ ನಡೆಯುತ್ತವೆ ಹಾಗಾಗಿ ಬೀದರ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಅವರು ಶುಕ್ರವಾರ ಸಂಜೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಬಾಲ್ಯವಿವಾಹ ನಡೆಯುತ್ತಿದೆ ಎಂಬ ದೂರು ಕಂಡು ಬಂದ ತಕ್ಷಣ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ ಅದು ನಿಜವಾಗಿದ್ದರೆ ಸಂಬಂಧಿಸಿದವರ ಮೇಲೆ ಪ್ರಕರಣ ದಾಖಲು ಮಾಡಬೇಕು ಅಂದಾಗ ಮುಂದೆ ಬಾಲ್ಯ ವಿವಾಹಗಳು ನಡೆಯುವದಿಲ್ಲ ಎಲ್ಲಾ ಭಾಗಿದಾರ ಇಲಾಖೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪಾತ್ರ ಬಹಳ ಮುಖ್ಯವಾಗಿದ್ದು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಬಾಲ್ಯ ವಿವಾಹ ಮಾಡುವುದು ಮತ್ತು ಅದಕ್ಕೆ ಪೆÇ್ರೀತ್ಸಾಹ ನೀಡುವ ವ್ಯಕ್ತಿಗೆ ಮತ್ತು ಹುಡುಗಿಯ ಪೆÇೀಷಕರಿಗೆ ಮತ್ತು ನಿರ್ದಿಷ್ಟ ವ್ಯಕ್ತಿಗೆ 3 ತಿಂಗಳ ಜೈಲು ಶಿಕ್ಷೆಯನ್ನು ಮತ್ತು ಆ ಸಮಯಕ್ಕೆ ಸೂಚಿಸಿದ ದಂಡ ನೀಡಲಾಗುತ್ತದೆ. ಬಾಲ್ಯ ವಿವಾಹವು ಒಂದು ಸಾಮಾಜಿಕ ಪಿಡುಗಾಗಿದ್ದು ಇದರ ನಿರ್ಮೂಲನೆಗಾಗಿ ವಿವಿಧ ಸಂಘಟನೆಗಳು. ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ಮತ್ತು ಸಮಾಜದ ಪಾತ್ರವು ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಬಾಲಕಿಯರ ಬಾಲ ಮಂದಿರ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ದಾಖಲಾದ ಪೆÇಕ್ಸೊ ಪ್ರಕರಣಗಳ ಮಾಹಿತಿ. ಮಾತೃವಂದನಾ ಯೋಜನೆ, ಸಖಿಒನ್ ಸ್ಟಾಫ್, ಸ್ವಾಧಾರ ಗೃಹ ಸೇರಿದಂತೆ ಇತರೆ ವಿಷಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಅವುಗಳನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗುವುದರ ಜೊತೆಗೆ ಜಿಲ್ಲೆಯ ಹೆಚ್ಚಿನ ಪ್ರಗತಿ ಸಾಧಿಸಬೇಕು ಹಾಗೂ ದೇವದಾಸಿ ಮತ್ತು ಎಚ್.ಐ.ವಿ ಪೀಡಿತ ಮಹಿಳೆಯರಿಗೆ ಜಾಗವಿದ್ದರೆ ಅವರಿಗೆ ಮನೆ ಕಟ್ಟಿಸಿಕೊಡಲು ಅವಕಾಶವಿದ್ದು ಅಂತವರ ಪಟ್ಟಿ ನೀಡುವಂತೆ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕರಾದ ಪ್ರಭಾಕರ್ ಮಾತನಾಡಿ, ಬೀದರ ಜಿಲ್ಲೆಯಲ್ಲಿ ಏಪ್ರಿಲ್-2023 ರಿಂದ ಫೆಬ್ರವರಿ-2024 ರವರೆಗೆ ಒಟ್ಟು 31 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ನಾಲ್ಕು ಬಾಲ್ಯ ವಿವಾಹಗಳು ನಡೆದಿದ್ದು ಅವುಗಳನ್ನು ನಡೆಸಿದವರ ಮೇಲೆ ಎಫ್.ಐ.ಆರ್. ದಾಖಲಿಸಲಾಗಿದೆ ಹಾಗೂ ಸದರಿ ಪಾಲಕರಿಂದ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡು ಅವರಿಗೆ ಬಾಲ್ಯವಿವಾಹದ ಕುರಿತು ಅರಿವು ಮೂಡಿಸಿ, ಸದರಿ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಈ ಸಭೆಯಲ್ಲಿ ಹೆಚ್ಚುವರಿ ಪೆÇಲೀಸ್ ಅಧಿಕ್ಷಕರಾದ ಮಹೇಶ ಮೆಘಣ್ಣವರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರಜಿಯಾ ಬಳಬಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಗುರುರಾಜ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅವಿನಾಶ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸದಾಶಿವ ಬಡಿಗೇರ, ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಎನ್.ಜಿ.ಓ ಮತ್ತು ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.