ತಾಲ್ಲೂಕು ಆಡಳಿತದಿಂದ ರೇಣುಕಾಚಾರ್ಯರ ಜಯಂತಿ
ಸಂಜೆವಾಣಿ ವಾರ್ತೆ
ಔರಾದ್ : ಮಾ.24:ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತದ ವತಿಯಿಂದ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವದ ಜರುಗಿತು.
ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೆ ವಿಶ್ವಕ್ಕೆ ಶಾಂತಿ ಶಾಂತಿ ಎಂದು ಭೋದಿಸಿದ ಜಗದಾದಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಸಾಮರಸ್ಯ, ಸಹಬಾಳ್ವೆ, ಸೌಹರ್ದತೆ ಬದುಕನ್ನು ಅವರು ನಮಗೆ ಬೋಧಿಸಿದ್ದಾರೆ. ಅವರ ತತ್ವ ಸಿದ್ಧಾಂತ ಮನುಕೂಲಕ್ಕೆ ದಾರಿದೀಪವಾಗಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಿರಸ್ತೆದಾರ ಶ್ರೀದೇವಿ ನವಾಡೆ, ಅಮಿತ್ ಕುಲಕರ್ಣಿ, ದೀಪಕ, ರವಿ ಮಾನೆ ಉತ್ತಮ ರಾಠೋಡ, ಗುರುಪ್ರಸಾದ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.