ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಲು ಸೂಚನೆ
ಕಲಬುರಗಿ,ಮಾ.23:ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ನೀರಿನ ಮೂಲಗಳಾದ ಭೀಮಾ ನದಿ, ಹಾಗೂ ಬೆಣ್ಣೇತೋರಾ ನದಿಗಳಲ್ಲಿ ಪ್ರತಿದಿನ ನೀರಿನ ಮಟ್ಟ ಇಳಿಕೆಯಾಗುತ್ತಿದೆ.ಆದ್ದರಿಂದ ಹೋಳಿ ಹಬ್ಬದ ಸಂದರ್ಭದಲ್ಲಿ ನಗರದ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವುದರ ಜೊತೆಗೆ ಮಕ್ಕಳು ಹಾಗೂ ಹಿರಿಯರು ಚರ್ಮಕ್ಕೆ ಹಾನಿಕರವಲ್ಲದ ನೈಸರ್ಗಿಕ ಬಣ್ಣಗಳನ್ನು ಮಾತ್ರ ಉಪಯೋಗಿಸಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.