ವಿವಿಧೆಡೆ ದಾಳಿ: ಅಕ್ರಮ ಮದ್ಯ ಜಪ್ತಿ
ಕಲಬುರಗಿ,ಮಾ.23-ವಿವಿಧೆಡೆ ದಾಳಿ ನಡೆಸಿರುವ ಪೊಲೀಸರು ಮೂವರನ್ನು ಬಂಧಿಸಿ 6719 ರೂ.ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ.
ಸಿಂದಗಿ (ಬಿ) ಗ್ರಾಮದಲ್ಲಿ ಮನೆಯ ಮುಂದೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇಲೆ ಸಬ್ ಅರ್ಬನ್ ಪೊಲೀಸ್ ಠಾಣೆಯ ಪಿಐ ಮಹ್ಮದ್ ಫಸಿಯೋದ್ದೀನ್ ಮತ್ತು ಸಿಬ್ಬಂದಿ ದಾಳಿ ನಡೆಸಿ ರುಕ್ಮಯ್ಯ ಕಲಾಲ ಎಂಬಾತನನ್ನು ಬಂಧಿಸಿ 2,583 ರೂ.ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ.
ಕೆಸರಟಗಿ ತಾಂಡಾಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿರುವ ಕಿರಾಣಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇಲೆ ಸಿಸಿಬಿ ಘಟಕದ ಪಿಎಸ್‍ಐ ಶಿವಪ್ಪ ಮತ್ತು ಸಿಬ್ಬಂದಿ ದಾಳಿ ನಡೆಸಿ ಬಸವರಾಜ ರಾಠೋಡ್ ಎಂಬಾತನನ್ನು ಬಂಧಿಸಿ 2,936 ರೂ.ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ.
ಗಂಗಾನಗರದ ಹನುಮಾನ ಮಂದಿರ ಹತ್ತಿರ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇಲೆ ಆರ್.ಜಿ.ನಗರ ಪೊಲೀಸ್ ಠಾಣೆಯ ಎಎಸ್‍ಐ ಹಣಮಂತ ಕಟ್ಟಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಶರಣು ಕೂಡಿ ಎಂಬಾತನನ್ನು ಬಂಧಿಸಿ 1200 ರೂ.ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ.
ಸಬ್ ಅರ್ಬನ್, ವಿಶ್ವವಿದ್ಯಾಲಯ ಮತ್ತು ಆರ್.ಜಿ.ನಗರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.