ಶಂಕರಗೌಡ ಹಿರೇಗೌಡರ್ ಸನ್ಮಾನ
ಮುದ್ದೇಬಿಹಾಳ,ಮಾ.23: ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಿದ್ದು, ಇತ್ತೀಚೆಗೆ ಗ್ಯಾರಂಟಿ ಯೋಜನೆ ಅಧ್ಯಕ್ಷರಾಗಿ ನೇಮಕವಾದ ಶಂಕರಗೌಡ ಹಿರೇಗೌಡರ್ ಅವರನ್ನು ಸನ್ಮಾನಿಸಲಾಯಿತು.
ರಾಜ್ಯದ 5 ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ.ಗ್ಯಾರಂಟಿ ಜಾರಿ ಮಾಡಿದ ನಿಟ್ಟಿನಲ್ಲಿ ರಾಜ್ಯದಲ್ಲಿ ಸಮಿತಿ ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು. ಅದರಂತೆ ಈಗ ರಾಜ್ಯ ಮಾತ್ರವಲ್ಲದೇ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಸಮಿತಿಯನ್ನು ರಚನೆಯಾಗಲಿದೆ. ಈ ಮೂಲಕ ಕಾರ್ಯಕರ್ತರಿಗೆ ಅವಕಾಶ ನೀಡುವ ಉದ್ದೇಶವನ್ನು ಕಾಂಗ್ರೆಸ್ ಹೊಂದಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಎಸ್.ಸಿ ಮೋರ್ಚಾ ಅಧ್ಯಕ್ಷ ಶ್ರೀಕಾಂತ ಚಲವಾದಿ ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವಾಯ್.ಎಚ್ ವಿಜಯಕರ, ಸಿ.ಜಿ ವಿಜಯಕರ, ವಾಯ್.ವಾಯ್ ಚಲವಾದಿ, ಯಲ್ಲಪ್ಪ ಹಡಲಗೇರಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವು ಶಿವಪುರ ಸೇರಿದಂತೆ ಹಲವರಿದ್ದರು.