ನವೀನ್ ಪಬ್ಲಿಕ್ ಶಾಲೆ ಘೋಷಣೆ11 ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ
ಬೀದರ್:ಮಾ.23: ಇಲ್ಲಿಯ ಕುಂಬಾರವಾಡ ರಸ್ತೆಯಲ್ಲಿ ಇರುವ ನವೀನ್ ಪಬ್ಲಿಕ್ ಶಾಲೆಯು 2024-25ನೇ ಶೈಕ್ಷಣಿಕ ವರ್ಷದಲ್ಲಿ 11 ಬಡ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಉಚಿತ ಪ್ರವೇಶ ಕಲ್ಪಿಸುವುದಾಗಿ ಘೋಷಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಬೇಟಿ ಬಚಾವೋ, ಬೇಟಿ ಪಡಾವೋ’ ಅಭಿಯಾನ ಅಂಗವಾಗಿ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ಶಾಲೆಯ ಅಧ್ಯಕ್ಷ ಕಾಮಶೆಟ್ಟಿ ಚಿಕ್ಕಬಸೆ ತಿಳಿಸಿದ್ದಾರೆ.
ಕೌಟುಂಬಿಕ ಹಿನ್ನೆಲೆ, ಪ್ರತಿಭೆ ಹಾಗೂ ಪ್ರವೇಶ ಪರೀಕ್ಷೆಯಲ್ಲಿ ಪಡೆಯುವ ಅಂಕಗಳ ಆಧಾರದಲ್ಲಿ 1 ರಿಂದ 9ನೇ ತರಗತಿ ವರೆಗೆ ಪ್ರವೇಶ ನೀಡಲಾಗುವುದು ಎಂದು ಹೇಳಿದ್ದಾರೆ.
ಉಚಿತ ಪ್ರವೇಶಕ್ಕಾಗಿ ಮಾರ್ಚ್ 24 ರಂದು ಬೆಳಿಗ್ಗೆ 11ಕ್ಕೆ ಶಾಲೆಯಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರವೇಶ ಪರೀಕ್ಷೆಗೆ ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 7022513111ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.