ಸ್ವ ಉದ್ಯೋಗದಿಂದ ಸ್ವಾವಲಂಬಿ ಜೀವನ

ಸಂಜೆವಾಣಿ ವಾರ್ತೆ
ಹಿರಿಯೂರು.ಮಾ.೨೩-ತಾಲೂಕಿನ ಧರ್ಮಪುರ ವಲಯದ ಖಂಡೇನಹಳ್ಳಿ ಗ್ರಾಮದಲ್ಲಿ ಶ್ರೀ ಸಂಪಿಗೆ ಜ್ಞಾನವಿಕಾಸ ಕೇಂದ್ರದ ವತಿಯಿಂದ ಮೂರು ತಿಂಗಳಗಳ ಕಾಲ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ  ಸಮಾರೋಪ ಕಾರ್ಯಕ್ರಮವನ್ನು ನಡೆಸಲಾಯಿತು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ನಿರ್ದೇಶಕರಾದ  ವಿನಯ್ ಕುಮಾರ್ ಸುವರ್ಣ ರವರು  ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಿಳೆಯರು ಕೇವಲ ಮನೆಗೆ ಮಾತ್ರ ಸೀಮಿತವಾಗದೆ ಸ್ವಉ ದ್ಯೋಗದಿಂದ ಸ್ವಾವಲಂಬಿ ಜೀವನ ಮಾಡುವ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಹಿರಿಯೂರು ತಾಲೂಕಿನ ಯೋಜನಾಧಿಕಾರಿಗಳಾದ ಹರಿಪ್ರಸಾದ್ ರೈ ಎಂಐಎಸ್ ಯೋಜನಾಧಿಕಾರಿ  ಮನು ಕುಮಾರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸಾವಿತ್ರಮ್ಮ ಒಕ್ಕೂಟದ ಅಧ್ಯಕ್ಷರು ವಲಯದ ಮೇಲ್ವಿಚಾರಕರು ಜ್ಞಾನವಿಕಾಸ ಸಮನ್ವ್ಯಾಧಿಕಾರಿ ಸೇವಾ ಪ್ರತಿನಿಧಿ ಹಾಗೂ ಕೇಂದ್ರದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು