ಪಟ್ಟಣದಾದ್ಯಂತ ನೀರಿನ ಸಮಸ್ಯೆ: ಪಟ್ಟಣ ಪಂಚಾಯಿತಿ ಆಡಳಿತ ನಿರ್ಲಕ್ಷ್ಯ
ಸಂಜೆವಾಣಿ ವಾರ್ತೆ
ಹನೂರು ಮಾ 23 :- ಪಟ್ಟಣದ ಬಹುತೇಕ ಕಡೆಗಳಲ್ಲಿ ನೀರಿನ ಸಮಸ್ಯೆ ಉದ್ಭವವಾಗಿದ್ದು ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಸಮರ್ಪಕವಾಗಿ ನೀರು ಪೂರೈಸಲು ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ವಿಫಲವಾಗಿದೆ ಎಂದು ಪಟ್ಟಣದ ನಿವಾಸಿಗಳು ಆರೋಪ ಮಾಡಿದ್ದಾರೆ.
ಹನೂರು ಪಟ್ಟಣದಲ್ಲಿ 13 ವಾರ್ಡನಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಇಲ್ಲಿನ ಜನರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ತೊಂಬೆ ಪಬ್ಲಿಕ್ ನಲ್ಲಿ ಮನೆನಲ್ಲಿಗಳಲ್ಲಿ ನೀರು ಸರಿಯಾದ ಸಮಯಕ್ಕೆ ಬಾರದೆ ಮನೆ ಬಳಕೆಗೆ ನೀರಿಲ್ಲದೆ ಬಳಲುವವಂತಾಗಿದೆ ಇಲ್ಲಿನ ಜನರ ಸ್ಥಿತಿ.
ಕಳೆದ ಹಲವಾರು ದಿನಗಳಿಂದ ಕಾವೇರಿ ನೀರು ಸರಬರಾಜು ಇಲ್ಲಾ ಬೋರ್ ವೇಲ್ ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಇದರಿಂದ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿ ಉದ್ಭವವಾಗುತ್ತಿದೆ. ದಿನಕಾಳದಂತೆ ನೀರಿಗಾಗಿ ಇನ್ನಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬ ಭಯದ ವಾತಾವರಣ ನಿರ್ಮಾಣವಾಗಿದೆ.
ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಶ್ರೀಧರ್ ಅವರು ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಮುಂದಾಗಿದೆ ನಿರ್ಲಕ್ಷ ಮಾಡುತ್ತಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಪಟ್ಟಣದಲ್ಲಿನ ನೀರಿನ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.