ಆನೆ ದಾಳಿಗೆ ಸಿಲುಕಿ ವ್ಯಕ್ತಿ ಬಲಿ
ಸಂಜೆವಾಣಿ ವಾರ್ತೆ
ಹನೂರು ಮಾ 23 :- ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ಸಮಯದಲ್ಲಿ ಕತ್ತೆಕಾಲು ಪೆÇೀಡಿನಲ್ಲಿ ನಡೆದಿದೆ.
ಹನೂರು ತಾಲೂಕಿನ ಕತ್ತೆ ಕಾಲು ಪೆÇೀಡು ಗ್ರಾಮದ ಸೋಲಿಗ ಜನಾಂಗದ ಜಡೆಯ ಎಂಬುವರ ಪುತ್ರ ಮಾದ (23) ಆನೆ ದಾಳಿಗೆ ಮೃತಪಟ್ಟ ದುರ್ದೈವಿ.
ಬುಧವಾರ ರಾತ್ರಿ ಕಾರ್ಯನಿಮಿತ್ತ ಹಿರಿಯಂಬಲ ಗ್ರಾಮಕ್ಕೆ ತೆರಳಿ ಕತ್ತೆ ಕಾಲ್ ಪೆÇೀಡು ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಯುವಕ ಕಾಡಾನೆ ದಾಳಿಗೆ ಮೃತಪಟ್ಟಿರುವ ವಿಚಾರವನ್ನು ಸ್ಥಳೀಯರು ಗುರುವಾರ ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಹಾಗೂ ಪೆÇಲೀಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶವವನ್ನು ಹನೂರು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದರು.
ಘಟನಾ ಸ್ಥಳಕ್ಕೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ನವೀನ್ ಮಠದ್ ಅವರು ಭೇಟಿ ನೀಡಿ ಮಾಹಿತಿ ಪಡೆದಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.