ಮಹಿಳೆಯರು ಪುರುಷರμÉ್ಟೀ ಸಮಾನವಾಗಿ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡುತ್ತಾರೆ : ಲಕ್ಷ್ಮಿ ವಾಸುದೇವರಾವ್
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ.23-ಮಹಿಳೆಯರು ಪುರುಷರμÉ್ಟೀ ಸಮಾನವಾಗಿ ಎಲ್ಲಾ ಕೆಲಸ ಕಾರ್ಯಗಳನ್ನುಮಾಡುತ್ತಾರೆ ಎಂದು ಲಕ್ಷ್ಮಿ ವಾಸುದೇವರಾವ್ ತಿಳಿಸಿದರು.
ಅವರು ನಗರದ ಶಂಕರಪುರ ಬಡಾವಣೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಬ್ರಾಹ್ಮಿ ಮಹಿಳಾ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ವಿಶ್ವದೆಲ್ಲೆಡೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ. ಮಹಿಳೆಯರ ಸಾಮಾಜಿಕ, ಸಾಂಸ್ಕøತಿಕ, ಆರ್ಥಿಕ ಕ್ಷೇತ್ರಗಳಲ್ಲಿನ ಅವರ ಸಾಧನೆ, ಸಮಾಜಕ್ಕೆ ಅವರ ಕೊಡುಗೆಗಳನ್ನು ಸಂಭ್ರಮಿಸುವ ದಿನ ಇದಾಗಿದೆ. ಎಲ್ಲಾ ಮಹಿಳೆಯರು ತಮ್ಮಕಠಿಣ ಪರಿಶ್ರಮದ ಮೂಲಕ ಮೆಚ್ಚುಗೆ ಪಡಯುತ್ತಿದ್ದಾರೆ. ಈ ದಿನ ಮಹಿಳಾ ಸಾಧಕರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ವಿಶೇಷ ದಿನ ಇದಾಗಿದೆ. ಜೊತೆಗೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ.ಅಪ್ರತಿಮ ಸಾಧನೆ ಮಾಡಿದ ಮಹಿಳಾ ಸಾಧಕೀಯರಿಗೆ ಗೌರವ ಸಲ್ಲಿಸುವ ಮೂಲಕ ಮತ್ತಷ್ಟು ಸಾಧನೆಯನ್ನು ಮಾಡಲು ಪೆÇ್ರೀತ್ಸಾಹವನ್ನು ನೀಡಲಾಗುತ್ತದೆ.
ಮಹಿಳೆಯರು ಪುರುಷರμÉ್ಟೀ ಸಮಾನವಾಗಿ ಎಲ್ಲಾ ಕೆಲಸ ಕಾರ್ಯಗಳನ್ನು ಭಾಗಿಯಾಗುತ್ತಾರೆ ಎಂದು ಅವರು ಮಹಿಳೆಯ ಸಾಧನೆಯನ್ನು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಬ್ರಾಹ್ಮಿ ಮಹಿಳಾ ಸಂಘದ ಸಮಿತಿ,ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.