ರಸ್ತೆ ಕಾಮಗಾರಿ ಪರಿಶೀಲಿಸಿದ ಡಿಸಿ
ವಿಜಯಪುರ, ಮಾ.22:ಪ್ರವಾಸೋದ್ಯಮ ಇಲಾಖೆಯ ಅನುದಾನದ ಅಡಿ ಮಂಜೂರಾಗಿರುವ ವಿಜಯಪುರ ನಗರದ ರೈಲು ನಿಲ್ದಾಣ ಸಂಪರ್ಕಿಸುವ ರಸ್ತೆ, ರೈಲು ನಿಲ್ದಾಣದಿಂದ ರೈಲ್ವೆ ಬ್ರಿಜ್ ವರೆಗಿನ ಕಾಮಗಾರಿಯನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು, ಕೆ ಆರ್ ಐ ಡಿ ಎಲ್ ಸಂಸ್ಥೆ ಕಾರ್ಯಪಾಲಕ ಅಭಿಯಂತರ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.