ಖಂಡ್ರೆಗೆ ಕೈ ಟಿಕೆಟ್ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ
ಔರಾದ್ : ಮಾ.22:ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಬಲ ಆಕಾಂಕ್ಷಿ ಸಾಗರ ಖಂಡ್ರಭ ಆಯ್ಕೆಯಾದ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಪಟ್ಟಣದ ಕನ್ನಡಾಂಬೆ ವೃತ್ರದಲ್ಲಿ ಸೇರಿದ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಬೀದರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಹಲವು ದಿನಗಳಿಂದ ಕುತೂಹಲ ಕೆರಳಿಸಿತು, ಅಂತಿಮವಾಗಿ ಸಾಗರ ಖಂಡ್ರೆ ಅವರು ಆಯ್ಕೆಯಾಗಿರುವುದು ಖುಷಿ ತಂದಿದೆ. ಯುವಕರಿಗೆ ಮನ್ನಣೆ ನೀಡುವ ಮೂಲಕ ಕಾರ್ಯಕರ್ತರಲ್ಲಿ ಶಕ್ತಿ ತುಂಬಿದೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಈ ಬಾರಿ ಸಾಗರ ಖಂಡ್ರೆ ಅವರನ್ನು ಬಹುಮತದಿಂದ ಆಯ್ಕೆಯಾಗುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಜಿಲ್ಲಾ ಸಹ ಸಂಚಾಲಕ ಸುಧಾಕರ ಕೊಳ್ಳುರ, ಪಕ್ಷದ ಹಿರಿಯ ನಾಯಕರಾದ ಡಾ. ಫಯಾಜ ಅಲಿ, ಅನಿಲ ನಿರ್ಮಳೆ, ವೈಜಿನಾಥ ವಡಿಯರ, ಚಂದು ಡಿಕೆ, ರಾಜು ಮುದಾಳೆ, ಮುಂತಾದರೂ ಉಪಸ್ಥಿತರಿದ್ದರು.