ಚೆಕ್ ಪೋಸ್ಟ್ ಗಳಿಗೆ ಡಿಸಿ ಭೇಟಿ ಪರಿಶೀಲನೆ
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮಾ.22: ಚುನಾವಣೆ ಅಕ್ರಮಗಳನ್ನು ತಡೆಯಲು ಜಿಲ್ಲೆಯಲ್ಲಿ ಸ್ಥಾಪನೆ ಮಾಡಿರುವ 24 ಚೆಕ್ ಪೋಸ್ಟ್ ಗಳಲ್ಲಿ ಹಲವಡೆ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ದೂರಿನ ಮೇರೆಗೆ ಜಿಲ್ಲಾ ಚುನವಾಣಾ ಅಧಿಕಾರಿಗಳಾಗಿರುವ ಡಿಸಿ ಪ್ರಶಾಂತ್ ಕುಮಾರ್ ಮಿಶ್ರ ಹಲವು ಚೆಕ್ ಪೋಸ್ಟ್ ಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಜಿಲ್ಲೆಯಲ್ಲಿ 7, ಅಂತರ್ ಜಿಲ್ಲೆ, ಗಡಿಯಲ್ಲಿ 4 ಮತ್ತು ಅಂತರರಾಜ್ಯ ಆಂಧ್ರಪ್ರದೇಶ ಗಡಿಭಾಗದಲ್ಲಿ 13 ಸೇರಿ 24 ಚೆಕ್ ಪೋಸ್ಟ್ ಸ್ಥಾಪಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಪ್ರತಿ ಚೆಕ್‍ ಪೋಸ್ಟ್ ನಲ್ಲಿ 3 ಎಸ್‍ಎಸ್‍ಟಿ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಮತಕ್ಷೇತ್ರಕ್ಕೆ ಫ್ಲೈಯಿಂಗ್ ಸ್ಕ್ವ್ಯಾಡ್ ಮತ್ತು ವಿಡಿಯೋ ಕಣ್ಗಾವಲು ತಂಡಗಳನ್ನು ಸಹ ನೇಮಕ ಮಾಡಲಾಗಿದೆ.