ಮತದಾನ ಜಾಗೃತಿ ಕಾರ್ಯಕ್ರಮ
ಗದಗ,ಮಾ22 :ಲೋಕಸಭಾ ಚುನಾವಣೆ-2024 ರ ಅಂಗವಾಗಿ ಮತದಾನ ಜಾಗೃತಿಗಾಗಿ ಗದಗ ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಕುರ್ತಕೋಟಿ ಹಾಗೂ ಅಂತೂರ್ ಗ್ರಾಮ ಪಂಚಾಯತಿ* ವತಿಯಿಂದ ಗ್ರಾಮದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾಣಿಕರಾವ್ ಪಾಟೀಲ್ ರವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಚುನಾವಣೆಯನ್ನು ಎಲ್ಲರೂ ಹಬ್ಬದಂತೆ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂಬ ಉದ್ದೇಶದಿಂದ ವಿನೂತನವಾಗಿ ಸ್ವೀಪ್ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಕುರ್ತಕೋಟಿ ಗ್ರಾಮದ ಸಾರ್ವಜನಿಕರಿಗೆ ಗ್ರಾಮದಲ್ಲಿ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದರು.
ನಂತರ 18 ವರ್ಷ ತುಂಬುವ ಯುವ ಮತದಾರರಿಗೆ ಗಿಊಂ ಂಠಿಠಿ ದಲ್ಲಿ ನೋಂದಾಯಿಸಲು ಕರೆ ನೀಡಿದರು.
ಕೊನೆಯಲ್ಲಿ ಸಹಾಯಕ ನಿರ್ದೇಶಕರು, ಗದಗ ತಾಲ್ಲೂಕು ಪಂಚಾಯತಿ ರವರು ಮಾತನಾಡಿ ಕುರ್ತಕೋಟಿ ಹಾಗೂ ಅಂತೂರ್ ಎರಡು ಗ್ರಾಮ ಪಂಚಾಯತಿ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಬೇಕಾದರೆ
ಗ್ರಾಮದ ಎಲ್ಲ ಮತದಾರರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಂದರೆ ಮೇ 7 ರಂದು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ (ಗ್ರಾ. ಉ) ತಾ.ಪಂ. ಲೆಕ್ಕಧಿಕಾರಿ, ಗ್ರಾ.ಪಂ ಪಿಡಿಒ. ನರೇಗಾ ಸಿಬ್ಬಂದಿಗಳು ಹಾಗೂ ಕಾಯಕ ಬಂಧುಗಳು, ಸ್ವಸಹಾಯ ಸಂಘದ ಸದಸ್ಯರು, ಮತ್ತು ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.