ಸರ್ಕಾರಿ ಕಚೇರಿಗಳಲ್ಲಿ ಡಾ.ಬಾಬು ಜಗಜೀವನರಾಮ ಅವರ ಭಾವಚಿತ್ರ ಕಡ್ಡಾಯವಾಗಿ ಅಳವಡಿಸಲು ಒತ್ತಾಯ
ಕಲಬುರಗಿ,ಮಾ.21-ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ ಅವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಬೇಕು ಎಂದು ಡಾ.ಬಾಬು ಜಗಜೀವನರಾಮ ಅವರ 117ನೇ ಜಿಲ್ಲಾ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ರಮೇಶ ವಾಡೇಕರ, ಕಾರ್ಯಾಧ್ಯಕ್ಷ ಮಂಜುನಾಥ ನಾಲವಾರಕರ, ಪ್ರಚಾರ ಸಮಿತಿ ಅಧ್ಯಕ್ಷ ಶರಣು ಸಗರಕರ, ಪ್ರಚಾರ ಸಮಿತಿ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸರಡಗಿ ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಡಾ.ಬಾಬು ಜಗಜೀವನರಾಮ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.