ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಒತ್ತು: ರೇಣುಕ ರಾಜ್
ಸಂಜೆವಾಣಿ ನ್ಯೂಸ್
ಮೈಸೂರು.ಮಾ.21:- ದೇಶದ ಅಖಂಡತೆ ಮತ್ತು ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡುತ್ತದೆ. ಕಾಂಗ್ರೆಸ್ ಪಕ್ಷದಂತೆ ಪುಕ್ಕಟ್ಟೆ ಭಾಗ್ಯಗಳನ್ನು ನೀಡಿ, ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವುದಕ್ಕೆ ಹೋಗುವುದಿಲ್ಲ ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕ ರಾಜ್ ಹೇಳಿದರು.
ನಗರದ ಕುವೆಂಪು ನಗರದಲ್ಲಿರುವ ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಂದಂತಮ್ಮ ಮತ್ತು ಶ್ರೀ ಕಾಳಮ್ಮ ದೇವಸ್ಥಾನದಲ್ಲಿ ನಾರಿ ಶಕ್ತಿ ಎಂಬ ಕಾರ್ಯಕ್ರಮದಲ್ಲಿ ಶಕ್ತಿ ದೇವಿ ಪೂಜೆ ಮಾಡಿ ನಾವು ಶಕ್ತಿ ಆರಾಧಕರು, ಮತ್ತೊಮ್ಮೆ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ, ಹಲವಾರು ಘೋಷಣೆ ಕೂಗಿದರು.
ಈ ವೇಳೆ ಅವರು ಮಾತನಾಡಿ, ಬಿಜೆಪಿಯು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದೆ. ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಯರಿಗೂ ಸ್ಪರ್ಧಿಸುವ ಅವಕಾಶ ಕಲ್ಪಿಸಿದೆ. ಪಕ್ಷದ ಹುದ್ದೆಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ ಜನರು ಮಾರು ಹೋಗದಂತೆ ಜಾಗೃತಿ ಮೂಡಿಸಬೇಕಿದೆ. ದೇಶದ ಸುಭದ್ರತೆ, ರಕ್ಷಣೆ ಮತ್ತು ಆರ್ಥಿಕ ಬೆಳವಣಿಗೆಗೆ ಬಿಜೆಪಿಗೆ ಮತ ನೀಡುವಂತೆ ಜನರನ್ನು ಮನವೊಲಿಸಬೇಕು ಎಂದು ಹೇಳಿದರು.
ನರೇಂದ್ರ ಮೋದಿ ಅವರು ಮುದ್ರಾಯೋಜನೆ, ಜನಧನ ಯೋಜನೆ, ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ, ಸ್ವಚ್ಛ ಭಾರತ, ಉಜ್ವಲ ಯೋಜನೆ ಇನ್ನೂ ಹಲವಾರು ಯೋಜನೆಗಳ ಮೂಲಕ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದಾರೆ ಹಾಗೂ ಲೋಕಸಭೆ, ವಿಧಾನಸಭೆಗಳಲ್ಲಿ ಶೇ33ರಷ್ಟು ಮೀಸಲಾತಿ ನೀಡಿ, ಕಾನೂನು ರೂಪಿಸುವಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಉಪ ಮಹಾಪುರಾದ ಡಾಕ್ಟರ್ ರೂಪ , ಮಾಜಿನಗರ ಪಾಲಿಕೆ ಸದಸ್ಯರಾದ ಲಕ್ಷ್ಮಿ ಕಿರಣ್ ಗೌಡ, ನಗರ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ, ಮಮತಾ ಶೆಟ್ಟಿ, ಕ್ಷೇತ್ರದ ಅಧ್ಯಕ್ಷ ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷೆ ಲಕ್ಷ್ಮಿ, ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷೆ ಸರ್ವ ಮಂಗಳ, ಚಾಮುಂಡೇಶ್ವರಿ ಗ್ರಾಮಾಂತರ ಮಮತಾ ಗೌಡ, ನರಸಿಂಹರಾಜ ಕ್ಷೇತ್ರದ ಮಾಲಿನಿ ಪಾಲಾಕ್ಷ, ಹಾಗೂ ನೂರಾರು ಬಿಜೆಪಿ ಮಹಿಳಾ ಕಾರ್ಯಕರ್ತರು ಹಾಜರಿದ್ದರು.