ಜಿ.ಬಿ.ವಿನಯ್ ಕುಮಾರ್ ಗೆ ಕಾಂಗ್ರೆಸ್  ಟಿಕೇಟ್ ನೀಡಲು ಒತ್ತಾಯ
ಸಂಜೆವಾಣಿ ವಾರ್ತೆ
ದಾವಣಗೆರೆ.ಮಾ.೨೦; ಜಿಲ್ಲೆಯಲ್ಲಿ ಸಕ್ರಿಯರಾಗಿ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿರುವ ಕಾಂಗ್ರೆಸ್ ಮುಖಂಡರಾದ ಜಿ.ಬಿ ವಿನಯ್ ಕುಮಾರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೇಟ್ ನೀಡಬೇಕೆಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಅಭಿಮಾನಿಗಳ ಬಳಗದವರು ಒತ್ತಾಯಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಅಭಿಮಾನಿಗಳ ಬಳಗದ ರಘುದೊಡ್ಮನಿಮಾತನಾಡಿ ಜಿಲ್ಲೆಯ ಹಿಂದುಳಿದ ವರ್ಗದವರ ಶೋಷಿತರ ದೀನದಲಿತರು ಹಾಗೂ ಅಲ್ಪಸಂಖ್ಯಾತರು ಸಾಕಷ್ಟು ಬಾರಿ ಶಾಮನೂರು ಕುಟುಂಬಕ್ಕೆ ಪ್ರತಿ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ಕೊಟ್ಟಿದ್ದಕ್ಕೆ ಅವರು ಗೆದ್ದು ಮತದಾರರ ಹಾಗೂ ಜಿಲ್ಲೆಯ ಸಾಕಷ್ಟು ಸೇವೆಯನ್ನು ಮಾಡಿದ್ದಾರೆ. ಶಾಮನೂರು ರವರ ಕೊಡುಗೆ ಕಾಂಗ್ರೆಸ್ ಪಕ್ಷಕ್ಕೆ ಅಪಾರ.ಆದರೆ ನಾವು ಮತದಾರರು ಈ ಲೋಕಸಭಾ ಚುನಾವಣೆಯಲ್ಲಿ ಒಬ್ಬ ಹಿಂದುಳಿದ ವರ್ಗದ ವಿದ್ಯಾವಂತ ಸರಳ ಜೀವಿ ಯುವಕರ ಕಣ್ಮಣಿ ಹಳ್ಳಿ ಹುಡುಗ ಜೆ ಬಿ ವಿನಯ್‌ ಕುಮಾರ್ ರವರನ್ನು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯನ್ನಾಗಿಸಿ ಇವರನ್ನುಜಯಶೀಲರನ್ನಾಗಿಸಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ದೇಶಸೇವೆ ಮಾಡುವ ಅವಕಾಶಕೊಡಲು ಬಯಸುತ್ತೇವೆ.ಈ ಬಾರಿ ನಮ್ಮ ಜಿಲ್ಲೆಗೆ ಜಾತಿಮತ ಬೇಧವಿಲ್ಲದೆ ಸರಳ ಸಜ್ಜನಿಕೆಯ ಜಿ.ಬಿ ವಿನಯ್ ಕುಮಾರ್‌ರವರಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿಸಿ ಸಾಮಾಜಿಕ ನ್ಯಾಯ ಮಾಡುತ್ತದೆಂದು ನಂಬಿದ್ದೇವೆ. ಪ್ರತಿಯೊಬ್ಬರು ಅವಶ್ಯವಿರುವ ಶಿಕ್ಷಣಕ್ಕೆ ಮೊದಲ ಆದ್ಯತೆ. ಕ್ಷೇತ್ರದ ಅಭಿವೃದ್ಧಿಯ ಕನಸು, ಹಿಂದುಳಿದ ಶೋಷಿತರ ದೀನದಲಿತರ ಅಲ್ಪಸಂಖ್ಯಾತರ ಅಭಿವೃದ್ಧಿಯಿಂದಲೇ ದೇಶಾಭಿವೃದ್ಧಿ, ಹಳ್ಳಿಯ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿಯ ಸಾರುವ ಈ ಹೊಸಮುಖ ನಮ್ಮ ಅಭ್ಯರ್ಥಿಯಾಗಬೇಕು ಎಂಬುದು ಮತದಾರರ ಮನದಾಳದ ಮಾತು. ದಾವಣಗೆರೆ ಜಿಲ್ಲೆಗೆ ಕುಟುಂಬದ ರಾಜಕಾರಣ ಹೋಗಲಾಡಿಸಲು ಇದೇ ಸೂಕ್ತ ಸುಸಮಯ, ಅಕಸ್ಮಾತ್ ಜಿ.ಬಿ.ವಿನಯ್ ಕುಮಾರ್‌ರವರನ್ನು ಕಡೆಗಣಿಸಿ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದರೆ ಜಿಲ್ಲೆಯಲ್ಲಿ ಅಸಮಧಾನ ಉಂಟಾಗಿ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂದರು. ಎಐಸಿಸಿ ಪ್ಯಾನಲ್ ನಲ್ಲಿ ಕೊನೆಯ ಹಂತದವರೆಗೂ ವಿನಯ್ ಕುಮಾರ್ ಅವರ ಹೆಸರೇ ಮುಂಚೂಣಿಯಲ್ಲಿತ್ತು.ಆದರೆ ಹಣ ಹಾಗೂ ಒಳರಾಜಕಾರಣ ಕೆಲಸ ಮಾಡಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಉಮೇಶ್ ಕೆ ಸಂತೆಬೆನ್ನೂರು,ಮಹಮ್ಮದ್ ಅಲ್ತಾಫ್ ಹುಸೇನ್,ಬಸವನಗೌಡ,ಹೇಮಂತ್ ಕುಮಾರ್ ದಳವಾಯಿ,ಇರ್ಫಾನ್,ಶಿವಕುಮಾರ್, ವಿಜಯಕುಮಾರ್,ನಾಗರಾಜ್,ಪರಶುರಾಮ್ ಸೇರಿದಂತೆ ಅನೇಕರಿದ್ದರು.