ಮಾ. 23 ರಂದು ಸರಳವಾಗಿಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ
ಕಲಬುರಗಿ:ಮಾ.20:ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಮಾರ್ಚ್ 23 ರಂದು ಶನಿವಾರ ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ.
ಪಾಳಾ ಕಟ್ಟೀಮನಿ ಹಿರೇಮಠದ ಶ್ರೀ. ಷ. ಬ್ರ. ಡಾ. ಗುರುಮೂರ್ತಿ ಶಿವಾಚಾರ್ಯರು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸುವರು. ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಅಜಯ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಎಸ್,. ಕಲಬುರಗಿ ಜಂಗಮ ಸಮಾಜದ ಅಧ್ಯಕ್ಷ ರಾಚೋಟಯ್ಯ ಹಿರೇಮಠ ಹಾಗರಗುಂಡಗಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಚಂದರಕೇರ ಶ್ರೀ ವೇದಮೂರ್ತಿ ಪಂಡಿತ ಶಿವರುದ್ರಯ್ಯ ಶಾಸ್ತ್ರಿಗಳು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ.ಹಾಕೆ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ್ ಹಾಗೂ ಕಲಬುರಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.