ಗ್ಯಾಸ್ ಸಿಲಿಂಡರ್ ಸೋರಿಕೆ: ಬೆಂಕಿ ತಗುಲಿ ನಾಲ್ವರಿಗೆ ಗಂಭೀರ ಗಾಯ
ವಿಜಯಪುರ,ಮಾ.20: ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ರಾಜಾಜಿ ನಗರದಲ್ಲಿ ನಡೆದಿದೆ.
ಮಹಾದೇವ ದಿಂಡವಾರ ಎಂಬುವರ ಮನೆಯಲ್ಲಿ ಈ ಅವಘಡ ಸಂಭವಿಸಿ, ಮಹಾದೇವ, ಸಂಕೇತ, ಮಣಿಕಂಠ, ರಾಮು ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಂಕಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಮನೆಯ ವಸ್ತುಗಳು ಹಾನಿಯಾಗಿವೆ.
ಜಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.