ವೈದ್ಯಾಧಿಕಾರಿ ಸಿಬ್ಬಂದಿಗಳಿಗೆ ಸನ್ಮಾನ
ಸೇಡಂ, ಮಾ,20: ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿಂದು ಆಯೋಜಿಸಲಾದ ಮಾಸಿಕ ಸಭೆಯಲ್ಲಿ ಜಿಲ್ಲಾ ಕಾಲರಾ ನಿಯಂತ್ರಣ ಅಧಿಕಾರಿಗಳಾದ ಡಾ. ವಿವೇಕಾನಂದ ರೆಡ್ಡಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಸಂಜೀವ್ ಪಾಟೀಲ್ ಇವರ ನೇತೃತ್ವದಲ್ಲಿ ಜರುಗಿದ ಮಾಸಿಕ ಸಭೆಯಲ್ಲಿ ಆರೋಗ್ಯ ಇಲಾಖೆಯ ವಿವಿಧ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚಿನ ಪ್ರಗತಿಯನ್ನು ಸಾಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆಯಲ್ಲಿ ತಾಲೂಕಿನ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶಿವಯೋಗಿ ಸಾಕ್ಪಾಲ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಕುಮಾರಿ ಪ್ರೀತಿ ಭದ್ರ ತಾಲೂಕಾ ಬಿಪಿಎಮ್ ರವರಾದ ಸರ್ವೇಶ್ ಹಾಗೂ ಮಲೇರಿಯಾ ಮೇಲ್ವಿಚಾರಕರಾದ ಶ್ರೀ ಮೊಹಮ್ಮದ್ ಸೈಯದ್ ಹಾಗೂ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು. ಕಾರ್ಯಕ್ರಮದ ನಿರೂಪಣೆ ಶ್ರೀಮತಿ ಜ್ಯೋತಿ ಲಿಂಗಂಪಲ್ಲಿ ಇವರು ನಿರ್ವಹಿಸಿದರು.