ಚುನಾವಣಾ ಅಕ್ರಮ ತಡೆಗಟ್ಟಲು ಚೆಕ್ ಪೆÇೀಸ್ಟ್ ಗಳಲ್ಲಿ ತೀವ್ರ ನಿಗಾವಹಿಸಿ : ರಾಹುಲ ಶಿಂಧೆ
ಅಥಣಿ/ಚಿಕ್ಕೋಡಿ :ಮಾ.20: ಲೋಕ ಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಚಿಕ್ಕೋಡಿ ಲೊಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಚೆಕ್ ಪೆÇೀಸ್ಟ್ ಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಸೂಚನೆ ನೀಡಿದರು.
ಅವರು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಮಾ.19) ರಂದು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿವ ನಿಟ್ಟಿನಲ್ಲಿ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಚೆಕ್ ಪೆÇೀಸ್ಟ್ ಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು, ಸಿಬ್ಬಂದಿಗಳು ಚುನಾವಣಾ ಆಯೋಗದ ನಿರ್ದೇಶನದಂತೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಯಾವುದೇ ರೀತಿಯ ದೂರುಗಳಿಗೆ ಆಸ್ಪದ ನೀಡಬಾರದು ಜಾಗರೂಕತೆಯಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಸಂಬಂಧಿತ ಅಧಿಕಾರಿಗಳು ನಿಯಮಿತವಾಗಿ ಚೆಕ್ ಪೆÇೀಸ್ಟ್ ಗಳಗೆ ಭೇಟಿ ನೀಡಿ ಪರಿಶೀಲಿಸಬೇಕು.
ಮಾದರಿ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಚೆಕ್ ಪೆÇಸ್ಟ್ ಗಳಲ್ಲಿ ಜಪ್ತಿ ಮಾಡಲಾಗುವ ನಗದು, ಸರಕುಗಳ ವರದಿಯನ್ನು ನಿಗದಿತ ನಮೂನೆಯಲ್ಲಿ ಪ್ರತಿದಿನ ಒದಗಿಸಬೇಕು.
ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಯಾವುದೇ ದೂರುಗಳು ಬಂದಲ್ಲಿ ಸಂಬಂದಿಸಿದ ಅಧಿಕಾರಿಗಳು ಕೂಡಲೇ ಗಮನಹರಿಸಬೇಕು. ಈ ಕುರಿತು ಉದಾಸೀನ ಮನೋಭಾವ ತೋರಿದಲ್ಲಿ ಶಿಸ್ತುಕ್ರಮ ಜರುಗಿಸಲಾಗುವದು ಎಂದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ರಾಜಕೀಯ ಪಕ್ಷಗಳ ಬ್ಯಾನರ, ಗೋಡೆ ಬರಹಗಳನ್ನು ಕೂಡಲೇ ತೆರವುಗೊಳಿಸಬೇಕು. ಈ ಕುರಿತು ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವದು ಎಂದರು.
ಮತಯಂತ್ರಗಳ ರಾಂಡಮೈಸಗೆ ಸಂಬಂಧಪಟ್ಟಂತೆ ಅಗತ್ಯವಾದ ಪೆÇೀಲಿಸ ಸಿಬ್ಬಂದಿಗಳನ್ನು ನಿಯೋಜಿಸಬೇಕು.
ಸಭೆ ಸಮಾರಂಭಗಳ ಕುರಿತು ಅನುಮತಿಗಾಗಿ ಸುವಿಧಾ ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು. ಈ ಸುವಿಧಾ ವ್ಯವಸ್ಥೆಯ ಬಗ್ಗೆ ಕಾರ್ಯನಿರ್ವಹಿಸುವ ಅಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ತಿಳುವಳಿಕೆ ಹೊಂದಿರಬೇಕು. ಈ ಕುರಿತು ತಹಶೀಲ್ದಾರರು ನಿಯಮಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಮೆರವಣಿಗೆಗಳಿಗೆ ಕೋರಿ ಸಲ್ಲಿಸುವ ಅರ್ಜಿಗಳಿಗೆ ಸಂಬಂಧಿಸದಂತೆ ಅಗತ್ಯವಾದ ರೂಪುರೇಷೆಗಳನ್ನು ಮುಂಚಿತವಾಗಿಯೇ ಸಿದ್ದಪಡಿಸಿಟ್ಟುಕೊಳ್ಳುವಂತೆ ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಎಲ್ಲ ಅಧಿಕಾರಿಗಳು ಒಂದು ತಂಡವಾಗಿ ಕಾರ್ಯ ನಿರ್ವಹಿಸುವದರ ಮೂಲಕ ಯಶಸ್ವಿಗೊಳಿಸಬೇಕು. ಚುನಾವಣಾ ಮಾರ್ಗಸೂಚಿಗಳನ್ವಯ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಶ್ರಮಿಸುವಂತೆ ಚಿಕ್ಕೋಡಿ ಲೋಕಸಭಾ ಚುನಾವಣಾಧಿಕಾರಿ ರಾಹುಲ ಶಿಂಧೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಉಪವಿಭಾಗಾಧಿಕಾರಿ ಶ್ರೀಮತಿ ಮೆಹಬೂಬಿ ಸೇರಿದಂತೆ ವಿವಿಧ ಸಮಿತಿಗಳ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.