ವಿದ್ಯಾರ್ಥಿಗಳ ಸಾಧನೆಗೆ ನಿರಂತರ ಅಧ್ಯಯನ ಅಗತ್ಯ:ಸಂಗಮ್ಮ ಬಮ್ಮಣಿ
ಹುಮನಾಬಾದ್:ಮಾ.19: ಕಠಿಣ ಪರಿಶ್ರಮದಿಂದ ವಿದ್ಯಾರ್ಥಿಗಳ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಹಳ್ಳಿಖೇಡ (ಕೆ) ಗ್ರಾಮದ ಸರಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಸಂಗಮ್ಮ ಬಮ್ಮಣಿ ಹೇಳಿದರು.
ತಾಲೂಕಿನ ಹಳ್ಳಿಖೇಡ (ಕೆ) ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ನಡೆದ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಲೆಗೆ ಉತ್ತಮ ಹೆಸರು ಬರಬೇಕಾದರೆ ವಿದ್ಯಾರ್ಥಿಗಳು ನಿರಂತರ ಅಧ್ಯಾಯನ ಮಾಡಬೇಕು. ವರ್ಗಕೋಣೆಯಲ್ಲಿ ಬೋದಕರು ನೀಡಿರುವ ಸಲಹೆ ಸೂಚನೆಗಳನ್ನು ಚಾಚು ತಪ್ಪದೇ ಪಾಲಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಗುರು ಹಿರಿಯರನ್ನು ಗೌರವ ಮನೋಭಾವನೆಯಿಂದ ಕಾಣುವ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶೇಖ್ ಮಹೇಬೂಬ್ ಪಟೇಲ್ ಮಾತನಾಡಿ, ವಿದ್ಯಾರ್ಥಿಗಳ ಸವಾರ್ಂಗೀಣ ಬೆಳವಣಿಗೆಗೆ ಪೂರಕವಾದ ವಾತವರಣ ಹಳ್ಳಿಖೇಡ (ಕೆ) ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಇದೆ. ಇಲ್ಲಿನ ಶಿಕ್ಷಕರು ಬಹಳ ನಿಸ್ವಾರ್ಥ ಸೇವೆ ಮಾಡುತ್ತಾ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿರುವುದು ಶ್ಲಾಘನಿಯ ಎಂದರು.
ಈ ಸಂದರ್ಭದಲ್ಲಿ ಜ್ಯೋತಿ ಪಾಟೀಲ್, ಸುವರ್ಣಾ ತರಲಿ, ದತ್ತಾತ್ರೇಯ ಧೂಳೆ, ಸತೀಷ, ಪಲ್ಲವಿ ಬೀದರ್, ಜಯಶ್ರೀ ಹುಮನಾಬಾದ್, ಶೈಲಶ್ರೀ, ಸುಧಾರಾಣಿ, ಪೂಜಾ, ರತ್ನಮಾಲಾ ಸೇರಿದಂತೆ ಅನೇಕರು ಇದ್ದರು.