ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ
ಬೀದರ್,ಮಾ.19-ಜಿಲ್ಲೆಯಾದ್ಯಾಂತ ಶೋಷಿತ, ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆಗಳು ನಡೆಯುತ್ತಿದ್ದರು ಸಹ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಇರುವುದನ್ನು ಖಂಡಿಸಿ ಶೋಷಿತ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಷೋಷಿತ, ದಲಿತ, ಹಿಂದುಳಿದ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಇನ್ನೊಂದೆಡೆ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆಗಳಿಗೆ ಅವಮಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ರವರ ಕುರಿತು ಸೋಷಿಯಲ್ ಮಿಡಿಯಾದಲ್ಲಿ ಅಪಶಬ್ಬಗಳನ್ನು ಬರೆದು ಪೆÇೀಸ್ಟ್ ಮಾಡುತ್ತಿರುವುದು ನಡೆದಿದೆ. ಇನ್ನೊಂದು ಕಡೆ ರಾಜ್ಯದ ಸಂಸದರೊಬ್ಬರು ಸಂವಿಧಾನದ ಬಗ್ಗೆ ಪದೇ ಪದೇ ಹಗುರವಾಗಿ ಮಾತನಾಡುತ್ತಿದ್ದಾರೆ. ಇಂತಹ ಕೀಡಿಗೇಡಿಗಳ ಮೇಲೆ ಯಾವುದೇ ರೀತಿಯ ಕಾನೂನಿನ ಕ್ರಮ ಕೈಗೊಳ್ಳದೇ ಇರುವುದು ಖೇದಕರ ಸಂಗತಿಯಾಗಿದೆ. ಅಲ್ಲದೇ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಷೋಷಿತ, ದಲಿತರ ಮೇಲೆ ದೌರ್ಜನ್ಯಗಳು ನಡೆದರೆ ಆಯಾ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುತ್ತೇವೆ ಎಂದು ಬರಿ ಮಾಧ್ಯಮ ಸುದ್ದಿಯಲ್ಲಿ ಮಾತ್ರ ಇದೆ. ಆದರೆ ಇಲ್ಲಿಯವರೆಗೂ ಒಬ್ಬ ಜಿಲ್ಲಾಧಿಕಾರಿಯಾಗಲಿ ಅಥವಾ ಒಬ್ಬ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಲಿ ಒಬ್ಬ ಅಧಿಕಾರಿಯ ಮೇಲೆ ಯಾವುದೇ ತರಹದ ಕಾನೂನಿನ ಕ್ರಮ ಕೈಗೊಂಡಿರುವ ಉದಾಹರಣೆಗಳು ಇಲ್ಲ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಅನೇಕ ದೌರ್ಜನ್ಯ ಪ್ರಕರಣಗಳು ನಡೆದರೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ವಿಳಂಬ ನೀತಿ ಅನುಸರಿಸಿ ದಲಿತರ ಮೇಲೆ ನಿರಂತರವಾಗಿ ಅನ್ಯಾಯವಾಗಲು ಈ ಅಧಿಕಾರಿಗಳೇ ಕಾರಣವಾಗುತ್ತಿದ್ದಾರೆ ಎಂದು ಆರೋಪಿಸಿದರು.
ಸಮಿತಿ ಗೌರವಾಧ್ಯಕ್ಷ ರಾಜಕುಮಾರ ಮೂಲಭಾರತಿ, ಕಾರ್ಯಾಧ್ಯಕ್ಷ ವಿನೋದ ರತ್ನಾಕರ್, ಉಪಾಧ್ಯಕ್ಷ ರಾಹುಲ್ ಖಂದಾರ, ಜಿಲ್ಲಾಧ್ಯಕ್ಷ ವಿಷ್ಣುವರ್ಧನ ವಾಲದೊಡ್ಡಿ, ಅಂಬರೀಶ ಕುದರೆ, ರಾಜಕುಮಾರ ಶಿಂಧೆ, ಸುರೇಶ ಜೋಜನಾಕರ, ಮಹೇಶ ಗೋರನಾಳಕರ, ಉತ್ತಮ ಕುಂದೆ, ಗೌತಮ ಪ್ರಸಾದ, ಸಂತೋಷ ಏಣಕೂರೆ, ರಾಹುಲ್ ಢಾಂಗೆ, ಸುಭಾಷ ಲಾಧಾ, ರಾಜಕುಮಾರ ಡೋಂಗ್ರೆ, ಸಚೀನ್ ಗೀರಿ, ಪ್ರಕಾಶ ರಾವಣ, ಅಮೃತ ಮುತ್ತಂಗಿಕರ್, ರವಿ ಭುಸಂಡೆ, ಪ್ರದೀಪ ಭಾವಿಕಟ್ಟಿ, ಸಿದ್ಧಾರ್ಥ ಪ್ಯಾಗೆ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.