ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ನಿರಂತರ ಅಭ್ಯಾಸಕ್ಕೆ ಒತ್ತು ನೀಡಬೇಕು
ಅಫಜಲಪುರ:ಮಾ.19: ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ವಿದ್ಯಾಭ್ಯಾಸದ ಹಂತದಲ್ಲಿ ಮಕ್ಕಳು ನಿರಂತರ ಅಭ್ಯಾಸಕ್ಕೆ ಒತ್ತು ನೀಡಬೇಕು ಎಂದು ಬಳೂರಗಿಯ ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ. ಶ್ರೀಶೈಲ ಪಾಟೀಲ ತಿಳಿಸಿದರು.
ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದ ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶಾಲಾ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದಶಪಥ ಸ್ಮರಣ ಸಂಚಿಕೆ ಅನಾವರಣ ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಇಲ್ಲಿನ ಶಿಕ್ಷಣ ಸಂಸ್ಥೆಯಿಂದ ಗುಣಮಟ್ಟದ ಶಿಕ್ಷಣ ಪಡೆದು ತಾವು ಕಲಿತ ಶಾಲೆಗೆ ಹಾಗೂ ದೇಶಕ್ಕೆ ಕೀರ್ತಿ ತರುವ ಹೆಮ್ಮೆಯ ಮಕ್ಕಳಾಗಿ ಬೆಳೆಯಿರಿ ಎಂದು ಕರೆ ನೀಡಿದರು.
ಸಮಾರಂಭ ಉದ್ದೇಶಿಸಿ ಮಳೇಂದ್ರ ಸಂಸ್ಥಾನ ಹಿರೇಮಠದ ಪೂಜ್ಯ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿದರು. ಜಿ.ಪಂ ಮಾಜಿ ಸದಸ್ಯ ಪ್ರಕಾಶ ಜಮಾದಾರ, ಘತ್ತರಗಾ ಗ್ರಾ.ಪಂ ಮಾಜಿ ಅಧ್ಯಕ್ಷ ವಿಠ್ಠಲ ನಾಟೀಕಾರ, ಲಕ್ಷ್ಮೀಪುತ್ರ ಕಿರನಳ್ಳಿ ಸೇರಿದಂತೆ ಅನೇಕರು ಮಾತನಾಡಿದರು.
ಪ್ರಥಮ ದರ್ಜೆ ಗುತ್ತಿಗೆದಾರ ಎಸ್.ವೈ ಪಾಟೀಲ ದಶಪಥ ಸ್ಮರಣ ಸಂಚಿಕೆ ಅನಾವರಣಗೊಳಿಸಿದರು.
ಈ ವೇಳೆ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಚಟುವಟಿಕೆಗಳು ಜರುಗಿದವು ಹಾಗೂ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ ಚಿಣ್ಣರ ಚಿತ್ರ ಚಿತ್ತಾರ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಶಸ್ತಿ ಪ್ರಮಾಣ ಪತ್ರ ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ವೇ. ಗುರುಪಾದಯ್ಯ ಚರಂತಿಮಠ, ವೇ. ಸಿದ್ದಯ್ಯ ಆಕಾಶಮಠ, ಧರ್ಮಸ್ಥಳ ಸಂಸ್ಥೆಯ ಯೋಜನಾಧಿಕಾರಿ ಶಿವರಾಜ ಆಚಾರ್ಯ, ಮೈಹಿಬೂಬ ಪಟೇಲ,
ರಂಗರಾವ ಖೇಡಗಿಕರ, ಗುಂಡೇರಾವ ದೇಶಮುಖ, ಶಂಕ್ರೆಪ್ಪ ಮ್ಯಾಕೇರಿ, ಬಾಬುರಾವ ದೇಶಮುಖ, ಕಲ್ಯಾಣಿ ಸಿಂಧಗೇರಿ, ಈರಣ್ಣ ಹಂದರಕಿ ಸೇರಿದಂತೆ ಅನೇಕರು ಆಗಮಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಯಲ್ಲಪ್ಪ ತಳವಾರ, ಪ್ರ.ಕಾರ್ಯದರ್ಶಿ ಚಂದ್ರಕಾಂತ ನಾಯಕೋಡಿ, ನಿರ್ದೇಶಕ ಶಿವಕುಮಾರ ಚರಂತಿಮಠ ಸೇರಿದಂತೆ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಶಿಕ್ಷಕ ಬಸವರಾಜ ಫುಲಾರಿ ನಿರೂಪಿಸಿದರು. ಸ್ವಾಗತವನ್ನು ಮುಖ್ಯಗುರು ಪ್ರಭಾವತಿ ವಗ್ದರ್ಗಿ, ದೇವೇಂದ್ರ ಹುಲ್ಲೂರ ವಂದಿಸಿದರು.